ರಸ್ತೆ ಸುರಕ್ಷತಾ ಜಾಗೃತಿ ಸಪ್ತಾಹ ಸಂಚಾರ ನಿಯಮ ಪಾಲಿಸಿ ಸುರಕ್ಷಿತವಾಗಿರಿ
Road Safety Awareness Week Traffic Rules Policy Stay safe
ರಸ್ತೆ ಸುರಕ್ಷತಾ ಜಾಗೃತಿ ಸಪ್ತಾಹ ಸಂಚಾರ ನಿಯಮ ಪಾಲಿಸಿ ಸುರಕ್ಷಿತವಾಗಿರಿ
ಯರಗಟ್ಟಿ 31 : ಸಾರ್ವಜನಿಕರು, ವಿದ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿ ರಸ್ತೆ ಅಪಘಾತ ತಡೆಗಟ್ಟಬಹುದು, ಅಪಘಾತ ಸಂಭವಿಸಲು ಅಜಾಗರೂಕತೆ, ಅವಸರವೇ ಕಾರಣ ಇತ್ತೀಚಿನ ದಿನಗಳಲ್ಲಿ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆ ಅದಿಕವಾಗಿದೆ. ಹೆಲ್ಮೆಟ್ ಧರಿಸದೆ ಚಾಲನೆ, ಮಧ್ಯಪಾನ ಇವೆಲ್ಲವೂಗಳಿಂದ ದೂರವಾಗಿದ್ದು ಸುರಕ್ಷತಾ ಕ್ರಮಗಳನ್ನು ಅನುಸರಿಸಿದಾಗ ಮಾತ್ರ ನಾವು ಮತ್ತು ನಮ್ಮ ಕುಟುಂಬ ಸುರಕ್ಷಿತವಾಗಿರಿಸಲು ಸಾಧ್ಯ ಎಂದು ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರ ಮ್ಯಾನೇಜರ್ ರವೀಂದ್ರನ್ ಅಭಿಪ್ರಾಯ ವ್ಯಕ್ತಪಡಿಸಿದರು. ಎನ್.ಎಚ್.ಆಯ್.ಟಿ.ಪೋರೈ್ಸಟ್ ಸೊಸೈಟಿ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಜಂಟಿಯಾಗಿ ಯರಗಟ್ಟಿ ಗ್ರಾಮ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಚರಿಸಿದ್ದ ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ರಮ ಹಾಗೂ ಸ್ಪರ್ಧಾ ವಿಜೇತರಿಗೆ ಆಯೋಜಿಸಿದ್ದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು ಚಿತ್ರಕಲಾ ಸ್ಪರ್ಧೆಗಳಲ್ಲಿ ವಿಜೇತರಾಗಿರುವ 9 ನೇ ತರಗತಿಯ ವಿದ್ಯಾರ್ಥಿಗಳಾದ ಸಾಯಿಕುಮಾರ ದಬಂಡಿ, ಪ್ರಥಮ ಸ್ಥಾನ, ಸಾಕ್ಷಿ ಕೋರಿ ದ್ವಿತಿಯ ಸ್ಥಾನ, ಯಲ್ಲಾಲಿಂಗ.ಬಿ.ಘಸ್ತಿ ತೃತೀಯ ಸ್ಥಾನ ಹಾಗೂ ವಾಣಿಶ್ರೀ.ಎಲ್.ಮಾದರ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದು ಅವರೆಲ್ಲರಿಗೂ ಬಹುಮಾನ ವಿತರಿಸಲಾಯಿತು.. ಮುಖ್ಯ ಅತಿಥಿಯಾಗಿ ಮಾತನಾಡಿದ ಆಯ್.ಆಯ್.ಟಿ. ನವದೆಹಲಿಯ ಕುಮಾರಿ ಹೊನ್ನು ಮಾತನಾಡಿ ಭೂಮಿಯ ಮೇಲಿನ ಪ್ರತಿಯೊಬ್ಬ ವ್ಯಕ್ತಿಯೂ ವಾಹನಗಳನ್ನು ಬಳಸುತ್ತಿರಲಿ ಅಥವಾ ಬಳಸದಿರಲಿ ಅದರ ಮೇಲೆ ಕಾಳಜಿಯಾಗಿ ಇರಬೇಕು ಜನರು ತಮ್ಮ ವೈಯಕ್ತಿಕ ಸಾರಿಗೆಗೆ ಒಗ್ಗಿಕೊಳ್ಳುತ್ತಿದ್ದಾರೆ ಅದರಿಂದ ಹಿಂದೆಂದಿಗಿಂತಲೂ ಹೆಚ್ಚು ಜನದಟ್ಟಣೆ ಕಾಣುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಕಿರಣ ಚೌಗಲಾ ಮಾತನಾಡಿ ರಸ್ತೆ ನಿಯಮಗಳನ್ನು ಅನುಸರಿಸುವುದರಿಂದ ನಾವು ನಮ್ಮ ಕುಟುಂಬ ಸುರಕ್ಷಿತವಾಗಿರಿಸಲು ಸಾಧ್ಯ ಎಂದರು. ಉಪ ಪ್ರಾಂಶುಪಾಲರಾದ ಶ್ರೀಮತಿ.ಎ.ಆರ್ ಮಠಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಿತ್ರಕಲಾ ಶಿಕ್ಷಕರಾದ ಕುಮಾರ ಬಡಿಗೆರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು..ರೇಷ್ಮಾ ಗೋರೆಲ್ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 