ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿದ ರುದ್ರಗೌಡ ಗೌಡಪ್ಪನವರ
Rudragowda Gowdappa inaugurated the Thogari purchasing center
ಹನುಮಸಾಗರ 17: ಬೆಂಬಲಬೆಲೆ ಯೋಜನೆಯಡಿ 2025-26ನೇ ಸಾಲಿನಲ್ಲಿ ಗುಣಮಟ್ಟದ ತೊಗರಿ ಬೆಳೆಯನ್ನು ಪ್ರತಿ ಕ್ವಿಂಟಲ್ಗೆ ?8,000ಕ್ಕೆ ಖರೀದಿಸುವ ಸಲುವಾಗಿ ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ತೆರೆದ ತೊಗರಿ ಖರೀದಿ ಕೇಂದ್ರಕ್ಕೆ ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ ಶುಕ್ರವಾರ ಚಾಲನೆ ನೀಡಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಜೀರಸಾಬ ಮೂಲಿಮನಿ ಮಾತನಾಡಿ ರಾಜ್ಯ ಸರ್ಕಾರದ ವಿರುದ್ಧ ನಮ್ಮ ಸತತ ಹೋರಾಟದ ಫಲವಾಗಿ ಖರೀದಿ ಕೇಂದ್ರಕ್ಕೆ ಆರಂಭ ಮಾಡಿದು ನಮ್ಮ ಭಾಗದ ರೈತರಿಗೆ ಸಂತಸ ಉಂಟುಮಾಡಿದೆ ಅದೇಕೆ ಸರ್ಕಾರಕ್ಕೆ ಸಂಬಂಧ ಪಟ್ಟ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಧನ್ಯವಾದಗಳು ತಿಳಿಸಿದರು.
ನಂತರ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಪಟ್ಟೇದ ಮಾತನಾಡಿ ಗ್ರಾಮದ ಸುತ್ತಮುತ್ತ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಯೋಗ್ಯ ಬೆಲೆ ಸಿಕ್ಕಾಗ ಮಾತ್ರ ಅವರು ಆರ್ಥಿಕವಾಗಿ ಸದೃಢರಾಗಲು ಸಾಧ್ಯವಿದೆ. ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ತೊಗರಿಗೆ ?6000 ದರ ಸಿಗುತ್ತಿದ್ದು, ಖರೀದಿ ಕೇಂದ್ರದಲ್ಲಿ ಪ್ರತಿ ಕ್ವಿಂಟಾಲ್ಗೆ ?8 ಸಾವಿರ ರೂ. ದರದಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್ನಂತೆ ತೊಗರಿ ಖರೀದಿಸಲಾಗುತ್ತಿದೆ. ನೋಂದಣಿ ಕಾರ್ಯವು ನ.17 ರಿಂದ ಆರಂಭವಾಗಿದ್ದು ಮಾರ್ಚ್ 03 ವರೆಗೆ ನಡೆಯಲಿದ್ದು , ತೊಗರಿ ಖರೀದಿ ಪ್ರಕ್ರಿಯೆ 16-03-2036 ವರೆಗೆ ಇರಲಿದೆ.ಅದಕ್ಕಾಗಿ ಗ್ರಾಮದ ಸುತ್ತಮುತ್ತಲಿನ ರೈತರು ಬೆಂಬಲ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಯಾವುದೇ ರೈತರು ಮಧ್ಯವರ್ತಿಗಳ ಮೊರೆ ಹೋಗದಂತೆ ನೇರವಾಗಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಹೇಳಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಫಟಕದ ಅಧ್ಯಕ್ಷ ಯಮನೂರು ಮಡಿವಾಳರ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪರಸ್ಪಪ್ಪ ಹೊಸಮನಿ, ರಾಮಣ್ಣ ವಡ್ಡರ, ಚಂದಪ್ಪ ತಳವಾರ, ಮೈಬುಸಾಬ ಮುಲ್ಲಾ, ಉಮೇಶ್ ಬಾಚಾಲಾಪುರ, ಈರಣ್ಣ ಸಂಗಮದ, ಬದ್ರಿನಾಥ್ ಪುರೋಹಿತ, ಸಂಗಪ್ಪ ಮಾನ್ವಿ, ಶಿವಪ್ಪ ಕಂಪ್ಲಿ, ಶರಣಪ್ಪ ಬಾಚಾಲಾಪುರ,ಸಲೀಂ ಖಾಜಿ, ದಾದೇಸಾಬ, ಇತರರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 