ಹೂವಿನ ಹಡಗಲಿ

ಹೊಳಲು ಸರ್ಕಾರಿ ಪ್ರೌಢಶಾಲೆಗೆ ಎಸ್ ಡಿ ಎಂ ಸಿ ಪ್ರಶಸ್ತಿ

ಹೊಳಲು ಸರ್ಕಾರಿ ಪ್ರೌಢಶಾಲೆಗೆ ಎಸ್ ಡಿ ಎಂ ಸಿ ಪ್ರಶಸ್ತಿ

ಹೂವಿನ ಹಡಗಲಿ 02:   ತಾಲೂಕಿನ ಹೊಳಲು ಗ್ರಾಮದ ಸ್ವಾಮಿ ವಿವೇಕಾನಂದ ಸರ್ಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ಜಿಲ್ಲಾ ಮಟ್ಟದ ಉತ್ತಮ ಎಸ್ ಡಿ ಎಂ ಸಿ ಪ್ರಶಸ್ತಿ ಲಭಿಸಿದೆ.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಡಮಾಡುವ ಈ ಪ್ರಶಸ್ತಿಗೆ ತಾಲೂಕಿನ ಒಂದು ಪ್ರೌಢಶಾಲೆಯನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಫಲಕ, 1 ಲಕ್ಷ ನಗದು ಬಹುಮಾನ ಒಳಗೊಂಡಿದೆ.ಮುಖ್ಯ ಗುರುಗಳಾದ ಕೆ ಲಿಂಗಪ್ಪ ಮಾತನಾಡಿ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಸ್ ಡಿ ಎಂ ಸಿ ಅಧ್ಯಕ್ಷರು ಪದಾಧಿಕಾರಿಗಳ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕೆಲಸ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ತಾಲೂಕು ದೈಹಿಕ ಪರೀವೀಕ್ಷಕ ರಫಿ ಅಹಮದ್ ಖವಾಸ್ ಅವರ ಮಾರ್ಗದರ್ಶನದಲ್ಲಿ ಶಾಲೆಯ ಶಿಕ್ಷಕರು ಸಿಬ್ಬಂದಿ ಪರಿಶ್ರಮದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಯೋಜನೆ ರೂಪಿಸಿ ಜಾರಿಗೆ ತರಲಾಗುತ್ತಿದೆ. ಸರಣಿ ಪೂರ್ವ ಸಿದ್ಧತಾ ಪರೀಕ್ಷೆ, ಮಿಷನ್ ಪೋಷಕರ ಸಭೆ, ಪಾಲಕರ ಮನೆಗಳಿಗೆ ಭೇಟಿ ಮುಂತಾದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. 


ಸುದ್ದಿ ಓದಿ