ಸದಲಗಾ ಪುರಸಭೆ ಕಾಂಗ್ರೆಸ್ ತೆಕ್ಕೆಗೆ
Sadalaga Municipality under Congress's wing
ಸದಲಗಾ ಪುರಸಭೆ ಕಾಂಗ್ರೆಸ್ ತೆಕ್ಕೆಗೆ
ಚಿಕ್ಕೋಡಿ 10: ತಾಲೂಕಿನ ಸದಲಗಾ ಪುರಸಭೆಗೆ ಸೋಮವಾರ ನಡೆದ ಎರಡನೆ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮತ್ತು ಶಾಸಕ ಗಣೇಶ ಹುಕ್ಕೇರಿ ಸಮ್ಮುಖದಲ್ಲಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ ಹೋಗಿದೆ. ಪುರಸಭೆಯು 23 ಸದಸ್ಯರ ಬಲ ಹೊಂದಿದೆ. 11 ಬಿಜೆಪಿ ಬೆಂಬಲಿತ, 10 ಕಾಂಗ್ರೆಸ್ ಮತ್ತು ಇಬ್ಬರು ಜೆಡಿಎಸ್ ಬೆಂಬಲಿತ ಸದಸ್ಯರು ಇದ್ದರು. ಅಧಿಕಾರದ ಚುಕ್ಕಾಣಿ ಹಿಡಿಯಲು ಎಲ್ಲ ಅವಕಾಶ ಬಿಜೆಪಿಗೆ ಇದ್ದರೂ ಚುನಾವಣೆ ಕಣದಿಂದ ಬಿಜೆಪಿ ಸದಸ್ಯರು ಹಿಂದೆ ಸರಿದಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪುರಸಭೆ ಕಾಂಗ್ರೆಸ್ ತೆಕ್ಕೆಗೆ ಬಂದಿದೆ. ಕಾಂಗ್ರೆಸ್ ಬೆಂಬಲಿತ ಬಸವರಾಜ ಅಣ್ಣಾಸಾಹೇಬ ಗುಂಡಕಲ್ಲೆ ಅಧ್ಯಕ್ಷರಾಗಿ ಮತ್ತು ಶ್ರೀಮತಿ ವಿಜಯಲಕ್ಷ್ಮೀ ಸಂತೋಷ ನವಲೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಸಂಸದೆ ಪ್ರಿಯಂಕಾ ಜಾರಕಿಹೊಳಿ, ಶಾಸಕ ಗಣೇಶ ಹುಕ್ಕೇರಿ ಅವರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹೂಗೂಚ್ಚ ನೀಡಿ ಸನ್ಮಾನಿಸಿದರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರ ಸಿ.ಎಸ್.ಕುಲಕರ್ಣಿ ಕಾರ್ಯನಿರ್ವಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 