ಬಳ್ಳಾರಿ

ಸಂಡೂರು ವಿಧಾನಸಭೆ ಉಪಚುನಾವಣೆ; ಮತ ಎಣಿಕೆ ದಿನದಂದು ಮದ್ಯ ಮಾರಾಟ ನಿಷೇಧ

ಸಂಡೂರು ವಿಧಾನಸಭೆ ಉಪಚುನಾವಣೆ; ಮತ ಎಣಿಕೆ ದಿನದಂದು ಮದ್ಯ ಮಾರಾಟ ನಿಷೇಧ

ಸಂಡೂರು ವಿಧಾನಸಭೆ ಉಪಚುನಾವಣೆ; ಮತ ಎಣಿಕೆ ದಿನದಂದು ಮದ್ಯ ಮಾರಾಟ ನಿಷೇಧ 

ಬಳ್ಳಾರಿ 19:ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.23 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಕ್ತ ಹಾಗೂ ಶಾಂತಿಯುತ ನಡೆಸುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10-ಬಿ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ನ.22 ರ ಮಧ್ಯರಾತ್ರಿ 12 ಗಂಟೆಯಿಂದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. 

ನ.21 ರಂದು 122ನೇ ನೀರಾವರಿ ಸಲಹಾ ಸಮಿತಿ ಸಭೆಬಳ್ಳಾರಿ 19:ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ 122ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ನ.21 ರಂದು ಮಧ್ಯಾಹ್ನ 03.30 ಗಂಟೆಗೆ ಬೆಂಗಳೂರಿನ ವಿಕಾಸಸೌಧದ 4ನೇ ಮಹಡಿಯ ಕೊಠಡಿ ಸಂಖ್ಯೆ 419ರ ಸಮ್ಮೇಳನ ಸಭಾಂಗಣದಲ್ಲಿ ಏರಿ​‍್ಡಸಲಾಗಿದೆ. 

ಹಿಂಗಾರು ಹಂಗಾಮಿಗೆ ಲಭ್ಯವಾಗುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲಾಗುತ್ತದೆ.ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್‌.ತಂಗಡಗಿ ಅವರು ಅಧ್ಯಕ್ಷತೆ ವಹಿಸುವರು ಎಂದು ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ. 

ಗ್ರಾಫಿಕ್ಸ್‌ ಡಿಸೈನಿಂಗ್, ವಿಡಿಯೋ ಎಡಿಟಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನಬಳ್ಳಾರಿ 19:ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ  ಅಭಿವೃದಿ ನಿಗಮ ಮತ್ತು ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ವತಿಯಿಂದ ಪ್ರಸ್ತಕ ಸಾಲಿಗೆ ಮ್ಯಾನ್ಯುಯಲ್ ಸ್ಕಾಂವೆಂಜರ​‍್ಸ‌  ಮತ್ತು ಅವರ ಅವಲಂಬಿತ ಯುವಕ ಮತ್ತು ಯುವತಿಯರಿಗೆ ಗ್ರಾಫಿಕ್ಸ್‌ ಡಿಸೈನಿಂಗ್ ಮತ್ತು ವಿಡಿಯೋ ಎಡಿಟಿಂಗ್ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 

ತರಬೇತಿಯಲ್ಲಿ ಗ್ರಾಫಿಕ್ಸ್‌ ಡಿಸೈನಿಂಗ್, ವಿಡಿಯೋ ಎಡಿಟಿಂಗ್, ಅಡೋಬ್ ಫೋಟೋ ಶಾಪ್, ಕೊರಾಲ್ ಡ್ರಾ, ಕಾನ್ವಾ, ಆಡೋಬ್ ಪ್ರಿಮಿಯರ್ ಪ್ರೊ, ನುಡಿ ಸಾಫ್ಟ್‌ವೇರ್ ಹಾಗೂ ಇತರೆ ಸ್ಕಿಲ್ ತರಬೇತಿ ನೀಡಲಾಗುವುದು.ಅರ್ಹತೆ: 

ಮ್ಯಾನ್ಯುಯಲ್ ಸ್ಕಾಂವೆಂಜರ​‍್ಸ‌ ಮತ್ತು ಅವರ ಅವಲಂಬಿತರ ಯುವಕ-ಯುವತಿಯರು  18 ರಿಂದ  35 ವಯಸ್ಸನವರಾಗಿರಬೇಕು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮ್ಯಾನ್ಯಯಲ್ ಸ್ಕ್ಯಾಂವೆಂಜರ​‍್ಸ‌ರ  ಐಡಿ ಕಾರ್ಡ್‌  ಇರಬೇಕು. ಜಿಲ್ಲಾ  ವ್ಯವಸ್ಥಾಪಕರು ಅರ್ಹತೆ ಪರೀಶೀಲಿಸಿ ಶಿಫಾರಸ್ಸು ವರದಿ ಸಲ್ಲಿಸುವುದು. 

ಅರ್ಜಿ ಸಲ್ಲಿಸಲು ನ.25 ಕೊನೆಯ ದಿನವಾಗಿದೆ.ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆಂಟ್‌ನ ಆದರ್ಶ ಕಾಲೋನಿಯ ಸೆಂಟ್ ಜೋಸೆಪ್ ಶಾಲೆ ಎದುರಿನ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ  ಅಭಿವೃದಿ ನಿಗಮದ ಜಿಲ್ಲಾ  ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ವ್ಯಕ್ತಿ ಕಾಣೆ: ಪತ್ತೆಗೆ ಮನವಿ 

ಬಳ್ಳಾರಿ 19:ನಗರದ ಶ್ರೀರಾಂಪುರ ಕಾಲೋನಿಯ ಮಾರ್ಕಂಡಯ್ಯ ಏರಿಯಾದ ನಿವಾಸಿಯಾದ ನಾಗೇಶ್ ಎನ್ನುವ 34 ವರ್ಷದ ವ್ಯಕ್ತಿ ಕಾಣೆಯಾಗಿರುವ ಕುರಿತು ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಠಾಣಾಧಿಕಾರಿ ಅವರು ಮನವಿ ಮಾಡಿದ್ದಾರೆ. 

ವ್ಯಕ್ತಿಯ ಚಹರೆ: 

ಎತ್ತರ 5.2 ಅಡಿ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಕಪ್ಪು ಕೂದಲು ಇರುತ್ತದೆ. ವ್ಯಕ್ತಿ ಕಾಣೆಯಾದ ಸಂದರ್ಭದಲ್ಲಿ ಬೂದು ಬಣ್ಣದ ಟೀ-ಶರ್ಟ್‌, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಐ ಮೊ.9480803045, ಪಿಎಸ್‌ಐ ಮೊ.9480803085 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ