ಸರಳಾದೇವಿ ಕಾಲೇಜು: ವಿದ್ಯಾರ್ಥಿಗಳಿಗೆ ಪ್ರತಿದಿನ ಸಂವಿಧಾನ ಪೀಠಿಕೆ ಭೋದನೆ
Saraladevi College: Students are taught the preamble to the Constitution every day
ಬಳ್ಳಾರಿ 20: ನಗರದ ಹೃದಯಭಾಗದಲ್ಲಿರುವ ಮತ್ತು ಅತಿಹೆಚ್ಚು ವಿದ್ಯಾರ್ಥಿಗಳ ಪ್ರವೇಶಾತಿ ಹೊಂದಿದ ಕಾಲೇಜು ಎಂಬ ಖ್ಯಾತಿ ಪಡೆದ ಬಳ್ಳಾರಿಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿದಿನ ತರಗತಿ ಆರಂಭಕ್ಕೂ ಮುನ್ನ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಪ್ರಸ್ತಾವನೆ ಭೋದಿಸಲಾಗುತ್ತಿದೆ.
ಪ್ರತಿದಿನ (ರಜೆದಿನ ಹೊರತುಪಡಿಸಿ) ಬೆಳಿಗ್ಗೆ 09 ರಿಂದ ಮಧ್ಯಾಹ್ನ 01.30 ರ ವರೆಗೆ, ವಿಜ್ಞಾನ ವಿಭಾಗಗಳು ಒಳಗೊಂಡಂತೆ ಸಂಜೆ 04 ಗಂಟೆಯವರೆಗೆ ತರಗತಿ ನಡೆಯಲಿವೆ. ತರಗತಿ ಆರಂಭಕ್ಕೂ ಮುನ್ನ ಬೆಳಗಿನ ಪ್ರಾರ್ಥನಾ ಸಮಯದಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರಾಂಶುಪಾಲರು, ಉಪನ್ಯಾಸಕರು, ಅತಿಥಿ ಉಪನ್ಯಾಸಕರು ಮತ್ತು ಎಲ್ಲಾ ಅಧಿಕಾರಿ, ಸಿಬ್ಬಂದಿ ಹಾಗೂ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ತಪ್ಪದೇ ಭಾರತ ಸಂವಿಧಾನದ ಪ್ರಸ್ತಾವನೆವನ್ನು ಪಠಿಸುತ್ತಾರೆ.
‘ಸಂವಿಧಾನ ಪ್ರಸ್ತಾವನೆಯಲ್ಲಿ ನಮೂದಿಸಲಾದ ತತ್ವಗಳನ್ನು ಎಲ್ಲಾ ವಿದ್ಯಾರ್ಥಿಗಳು ಅಳವಡಿಸಿಕೊಂಡು ಅಂತರ್ಗತಗೊಳಿಸಿದಾಗ ಮಾತ್ರ ಸಂವಿಧಾನದ ಉದ್ದೇಶಗಳನ್ನು ಸಾಧಿಸಲು ಸಾಧ್ಯವಾಗುತ್ತದೆ’ ಎಂದು ಬಳ್ಳಾರಿಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಹ್ಲಾದ್ ಚೌಧರಿ ಹೇಳಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 