ಫೆ.12 ರಂದು ಸವಿತಾ ಮಹಷರ್ಿ ಜಯಂತಿ ಅರ್ಥಪೂರ್ಣ ಆಚರಣೆಗೆ ನಿಧರ್ಾರ

ಫೆ.12 ರಂದು ಸವಿತಾ ಮಹಷರ್ಿ ಜಯಂತಿ ಅರ್ಥಪೂರ್ಣ ಆಚರಣೆಗೆ ನಿಧರ್ಾರ

ಬಳ್ಳಾರಿ 02:ಸವಿತಾ ಮಹಷರ್ಿ ಜಯಂತಿಯನ್ನು ಇದೇ ಮೊದಲ ಬಾರಿಗೆ ಸಕರ್ಾರಿ ಕಾರ್ಯಕ್ರಮವನ್ನಾಗಿ ಫೆ.12ರಂದು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಹೇಳಿದರು.

   ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಏರ್ಪಡಿಸಿದ್ದ ಸವಿತಾ ಮಹಷರ್ಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು 

ಜಯಂತಿ ಆಚರಣೆಯ ಅಂಗವಾಗಿ ಅಂದು ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಸವಿತಾ ಮಹಷರ್ಿ ಭಾವಚಿತ್ರದ ಭವ್ಯ ಮೆರವಣಿಗೆಯು ಬೆಳಗ್ಗೆ 9.30 ಗಂಟೆಗೆ ನಗರದ ಮುನ್ಸಿಪಲ್ ಕಾಲೇಜು ಮೈದಾನದಿಂದ ಪ್ರಾರಂಭವಾಗಿ, ಗಡಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಜೈನ್ ಮಾಕರ್ೆಟ್, ಹೆಚ್.ಆರ್.ಜಿ ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ತಲುಪಲಿದೆ. ವೇದಿಕೆ ಕಾರ್ಯಕ್ರಮ ಬೆಳಗ್ಗೆ 11:30ಕ್ಕೆ ಸವಿತಾ ಮಹಷರ್ಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ ಪ್ರಾರಂಭವಾಗಲಿದೆ. ಸವಿತಾ ಮಹಷರ್ಿ ಅವರ ಕುರಿತ ಜೀವನ ಮತ್ತು ಸಾಧನೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುತ್ತದೆ. 

ಮೆರವಣಿಗೆಯಲ್ಲಿ ಆಕರ್ಷಕ ಕಲಾ ತಂಡಗಳ ನಿಯೋಜನೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದರು. 

   ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಬಿ.ನಾಗರಾಜ್, ಸಂಘ ಸಮಾಜದ ಪದಾಧಿಕಾರಿಗಳು, ಸಮಾಜದ ಇನ್ನಿತರ ಮುಖಂಡರು, ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.  


ಸುದ್ದಿ ಓದಿ