ದಾವಣಗೇರೆಯಲ್ಲಿ ಸವಿತಾ ಸಮಾಜದ ವಧು-ವರರ ಸಮಾವೇಶ
Savita Samaj bride and groom gathering in Davangere
ಗದಗ 08: ದಾವಣಗೆರೆ ಸವಿತಾ ಕ್ಷೇಮಾಭಿವೃದ್ಧಿ ಸಂಘದಿಂದ ಸಂಘದ ಅಧ್ಯಕ್ಷರಾದ ಪ್ರೊಫೆಸರ್ ವೆಂಕಟಾಚಲಪತಿ ಅವರ ನಿಯೋಗದ ಮುಂದಾಳತ್ವದಲ್ಲಿ ಸವಿತಾ ಸ್ವಯಂವರ ಮತ್ತು ಅಂತರರಾಜ್ಯ ಮಟ್ಟದ ಸವಿತಾ ಸಮಾಜದ ವಧು-ವರರ ಸಮಾವೇಶ-2026 ಕಾರ್ಯಕ್ರಮವು 25-01-2026 ಭಾನುವಾರ ಸಮಯ: ಬೆಳಿಗ್ಗೆ 10.00 ಗಂಟೆಗೆ ಸ್ಥಳ: ಚನ್ನಗಿರಿ ವಿರುಪಾಕ್ಷಪ್ಪನನರ ಕಲ್ಯಾಣ ಮಂಟಪ, ಗಡಿಯಾರ ಕಂಬದ ಹತ್ತಿರ, ದಾವಣಗೆರೆಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಗದಗ ಜಿಲ್ಲೆಯ ಸವಿತಾ ಸಮಾಜದ ಆಸಕ್ತ ವಧು-ವರರಿಗೆ ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರರದ ಕೃಷ್ಣಾ ಎಚ್ ಹಡಪದ ಅವರು ಕರೆ ನೀಡಿದ್ದಾರೆ. ಅವರು ಪತ್ರಿಕಾ ಹೇಳಿಕೆಯಲ್ಲಿ, ಮಾತನಾಡಿ "ಜೀವನದಲ್ಲಿ ಒಮ್ಮೆ ಬರುವ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ನಿಮ್ಮ ಜೀವನ ಸಂಗಾತಿಯನ್ನು ಹುಡುಕಲು, ನಿಮ್ಮ ಭವಿಷ್ಯವನ್ನು ರೂಪಿಸಲು, ಮತ್ತು ನಿಮ್ಮ ಕುಟುಂಬದ ಕನಸುಗಳನ್ನು ನನಸಾಗಿಸಲು ಈ ಸಮಾವೇಶ ಒಂದು ಉತ್ತಮ ಅವಕಾಶವಾಗಿದೆ
ಸಮಾಜದ ಯುವಕ-ಯುವತಿಯರು ಈ ಅವಕಾಶವನ್ನು ಬಳಸಿಕೊಂಡು, ತಮ್ಮ ಜೀವನವನ್ನು ಸುಂದರಗೊಳಿಸಿಕೊಳ್ಳಬೇಕು ಎಂದ ಅವರು ನಾವು ಗದಗ ಜಿಲ್ಲೆಯ ಎಲ್ಲಾ ಆಸಕ್ತ ವಧು-ವರರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸುತ್ತೇವೆ" ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರು ಪ್ರಬಾಕ್ಸ್ ಹೇಳಿಕೆ ಗದಗ ಜಿಲ್ಲೆಯ ಎಲ್ಲಾ ಸವಿತಾ ಸಮಾಜದ ಆಸಕ್ತ ವಧು-ವರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ದಾವಣಗೆರೆ ಸವಿತಾ ಕ್ಷೇಮಾಭಿವೃದ್ಧಿ ಸಂಘದಿಂದ ಮತ್ತು ಸಂಘದ ಅಧ್ಯಕ್ಷರಾದ ಪ್ರೊಫೆಸರ್ ವೆಂಕಟಾಚಲಪತಿ ಅವರ ನಿಯೋಗವು ಕೋರಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 