ರಾಷ್ಟ್ರಮಟ್ಟಕ್ಕೆ ಆಯ್ಕೆ
Selection for the national level
ತಾಳಿಕೋಟೆ 09: ತಾಲ್ಲೂಕಿನ ಮಿಣಜಗಿ ಸರ್ಕಾರಿ ಪ್ರೌಢಶಾಲೆಯ 9ನೆಯ ತರಗತಿ ವಿದ್ಯಾರ್ಥಿನಿ ಅಕ್ಷತಾ ಹಳ್ಳೂರ ಇವಳು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯ ಪೋಲ್ ವಾಲ್ಟ್ ( ಕೋಲು ನೆಗೆತ) ಸ್ಪರ್ಧೆಯಲ್ಲಿ ದ್ವಿತೀಯಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇದೇ ಡಿ.13 ರಿಂದ ಉತ್ತರ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾಳೆ.
ಈ ಕ್ರೀಡಾಪಟುವಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ರಾವತ ಪೂಜೇರಿಯವರಿಗೆ ಶಾಲೆಯ ಮುಖ್ಯ ಶಿಕ್ಷಕ ಬಿ.ಹೆಚ್. ತಿಳಗೂಳ, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಶಂಕರಗೌಡ ಬಿರಾದಾರ ಮತ್ತು ಸದಸ್ಯರು, ಶಾಲೆಯ ಶಿಕ್ಷಕರು, ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 