ಮಹಿಳೆಯರಿಗೆ ಆತ್ಮರಕ್ಷಣೆ ಅತ್ಯಗತ್ಯ: ಪ್ರೊ. ಹನುಮಂತಯ್ಯ ಪೂಜಾರಿ
Self-defense is essential for women: Prof. Hanumanthaiyya Poojary
ವಿಜಯಪುರ 27: ಆತ್ಮರಕ್ಷಣೆ ಮಹಿಳೆಯರಿಗೆ ಅತ್ಯಗತ್ಯ ಎಂದು ಮಹಿಳಾ ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಹಾಗೂ ಮುಖ್ಯಸ್ಥ ಪ್ರೊ. ಹನುಮಂತಯ್ಯ ಪೂಜಾರಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ ಸಹಯೋಗದಲ್ಲಿ ಪಿ.ಎಂ.ಉಷಾ ಯೋಜನೆ ಅಡಿಯಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ “ಆತ್ಮರಕ್ಷಣಾ” ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಆತ್ಮರಕ್ಷಣೆ ಎನ್ನುವುದು ಒಂದು ಕಲೆ. ಇಂದಿನ ಯುಗದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ಗಮನಿಸಿದರೆ, ವಿದ್ಯಾರ್ಥಿನಿಯರು ಹಾಗೂ ಮಹಿಳೆಯರು ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದರು.
ಸದೃಢ ದೇಹದಲ್ಲಿ ಸದೃಢ ಮನಸ್ಸು ಇರಬೇಕು. ಅದರ ಜೊತೆಗೆ ಕೌಶಲ್ಯವೂ ಅಗತ್ಯ. ಇಂದಿನ ಪುರುಷಪ್ರಧಾನ ಸಮಾಜದಲ್ಲಿ ಮಹಿಳೆಯರು ತಮ್ಮ ಸಾಧನೆಗಳ ಮೂಲಕ ಎಲ್ಲರಿಗೂ ಮಾದರಿಯಾಗಬೇಕು. ಮೇರಿಕೊಮ್, ಮೀರಾ ಪೊಘಾಟ್, ಕಣಂರ್ ಮಲ್ಲೇಶ್ವರಿಯವರಂತೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧಕಿಯರಾಗಿ ಬೆಳೆಯಲು ಮಹಿಳೆಯರು ಮುಂದಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಪ್ರಾಧ್ಯಾಪಕ ಡಾ. ಎಸ್. ಎಸ್. ರಾಜಮಾನೆ ಮಾತನಾಡಿ, ನಿರ್ಭಯ ಘಟನೆಗಳಂತಹ ಕಹಿ ಘಟನೆಗಳು ಪುನರಾವರ್ತನೆಗೊಳ್ಳಬಾರದೆಂದರೆ ಮಹಿಳೆಯರು ಆತ್ಮರಕ್ಷಣೆಯ ಕಲೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂದು ಹೇಳಿದರು.
ದುರ್ಗೇಶ ಆಹೇರಿ ಮಾತನಾಡಿ, ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣಾ ತರಬೇತಿ ನೀಡಿದರು. ಐ.ಕ್ಯೂಎ.ಸಿ.ಯ ಸಂಚಾಲಕ ಡಾ. ಅನಂತ ಪದ್ಮನಾಭ ಹಾಗೂ ಆತ್ಮರಕ್ಷಣಾ ತರಬೇತುದಾರ ದುರ್ಗೇಶ ಆಹೇರಿ, ಡಾ. ಭಾರತಿ ಹೊಸಟ್ಟಿ, ವಿದ್ಯಾರ್ಥಿನಿಯರು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸ್ವಾತಿ ಸ್ವಾಗತ ಗೀತೆ ಹಾಡಿದರು. ಕ್ರೀಡಾ ನಿರ್ದೇಶಕ ಡಾ. ಸುನೀಲ ನಡಕಟ್ಟಿ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು. ಪ್ರೊ.ಪಿ.ಬಿ.ಬಿರಾದಾರ ನಿರೂಪಿಸಿದರು. ಡಾ. ವಿಶ್ವನಾಥ ನಡಕಟ್ಟಿ ವಂದಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 