ಸರಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಲು ಶಶಿಕಲಾ ಕರೆ
ಬಳ್ಳಾರಿ 8: ಹೆಣ್ಣುಮಕ್ಕಳು ಸಕರ್ಾರದಿಂದ ಸಿಗುವ ಎಲ್ಲಾ ಸೌಲಭ್ಯಗಳ ಸದುಪಯೋಗಿಸಿಕೊಂಡು ಸಬಲರಾಗಬೇಕು ಎಂದು ಸಮಾಜ ಕಾರ್ಯಕತರ್ೆ ಶಶಿಕಲಾ ಕರೆ ನೀಡಿದರು.
ನಗರದ ಕೌಲ್ ಬಜಾರಿನ ನೀಲಕಂಠಸ್ವಾಮಿ ದೇವಸ್ಥಾನದ ಆವರಣದಲ್ಲಿ ಶುಕ್ರವಾರದಂದು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಬಳ್ಳಾರಿ ಶಾಖೆ, ಹಾಗೂ ಯಶಸ್ವಿನಿ ಮಹಿಳಾ ಮಂಡಳದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಅಂತರಾಷ್ಟೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಸ್ಥೆಯ ಪ್ರತಿನಿಧಿ ಸುಜಾತಾ ಪುರಾಣಿಕ ಮಾತನಾಡಿ, ಈ ವರ್ಷದ ಮಹಿಳಾ ದಿನಾಚರಣೆ ಘೋಷಣೆ ಮಹಿಳಾ ಸಬಲೀಕರಣ ಹಾಗೂ ಸಮಾನತೆ ಆಗಿದ್ದು ಅದರ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯಲು ಮತ್ತು ಅತೀ ಸಣ್ಣ ವಯಸ್ಸಿನಲ್ಲಿ ಹೆಣ್ಣು ಮಕ್ಕಳ ಮದುವೆ ಮಾಡುವುದನ್ನು ನಿಲ್ಲಿಸಲು ಮುಂದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಾದ ಶಶಿಕಲಾ ಅವರಿಗೆ ಸನ್ಮಾನಿಸಲಾಯಿತು. ಯಶಸ್ವಿನಿ ಮಹಿಳಾ ಮಂಡಳಿಯ ಅಂಜಲಿ ಅಧ್ಯಕ್ಷತೆ ವಹಿಸಿದ್ದರು. ಎಫ್.ಪಿ.ಎ.ಆಯ್ ಸಂಸ್ಥೆಯ ವಿಜಯಲಕ್ಷ್ಮಿರಾವ್ ಕಾರ್ಯಕ್ರಮವನ್ನು ನಿರೂಪಿಸಿದರು. ವಿಜಯಲಕ್ಷ್ಮಿ, ಪದ್ಮಾ, ಅಶೋಕ, ಯಶಸ್ವಿನಿ ಮಹಿಳಾ ಮಂಡಳಿಯ ಸದಸ್ಯರು ಹಾಗೂ ಇತರರು ಪಾಲ್ಗೊಂಡಿದ್ದರು.