ಕಾರವಾರ

ದಾಂಡೇಲಿ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ

ದಾಂಡೇಲಿ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ


  ದಾಂಡೇಲಿ 25 : ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಉಪನ್ಯಾಸಕರ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಶಾಸಕ ಆರಿ​‍್ವ. ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದೆ. ಬಿಸಿಎ ವಿಭಾಗದಲ್ಲಿ 146 ವಿದ್ಯಾರ್ಥಿಗಳಿದ್ದು, ಅಗತ್ಯವಿರುವ ಎಂಟು ಉಪನ್ಯಾಸಕರ ಪೈಕಿ ಒಬ್ಬರೂ ಖಾಯಂ ಉಪನ್ಯಾಸಕರಿಲ್ಲ. ಭೌತಶಾಸ್ತ್ರ ವಿಭಾಗದಲ್ಲೂ ಎರಡು ಹುದ್ದೆಗಳು ಖಾಲಿ ಇವೆ. ಉಪನ್ಯಾಸಕರು ಹಾಗೂ ಸಿಬ್ಬಂದಿ ಕೊರತೆಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ ಎಂದು ಸಮಿತಿ ಅಧ್ಯಕ್ಷ ಅಕ್ರಂ ಎ. ಖಾನ್ ತಿಳಿಸಿದ್ದಾರೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಕಾಲೇಜಿಗೆ ರಸ್ತೆ, ಬೀದಿ ದೀಪ ಹಾಗೂ ಅಗತ್ಯ ಶೈಕ್ಷಣಿಕ ಸೌಲಭ್ಯ ಕಲ್ಪಿಸಬೇಕು ಎಂದು ಸಮಿತಿ ಆಗ್ರಹಿಸಿದೆ. 


ಸುದ್ದಿ ಓದಿ