ಶಿಗ್ಗಾವ್

ಶ್ಯಾಮಲಾ ಅವರಿಗೆ ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿ

ಶ್ಯಾಮಲಾ ಅವರಿಗೆ ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿ

 

ಶಿಗ್ಗಾಂವಿ, ಸೆ.25: ಜ್ಞಾನದ ಬೆಳಕಿನೆಡೆಗೆ ಮಕ್ಕಳನ್ನು ಕರೆದೊಯ್ದು, ಮಾನವೀಯ ಮೌಲ್ಯಗಳ ಬೆಳವಣಿಗೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಮಾರ್ಗದರ್ಶನ ನೀಡಿದ ಹಾವೇರಿ ಪ್ರಾಂಶುಪಾಲೆ ಶ್ಯಾಮಲಾ ಅವರಿಗೆ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ರಾಜ್ಯ ಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.  

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಅಂಗವಾಗಿ ಸೆ.20ರಂದು ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.  

ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಗಣನೀಯ ಸೇವೆ, ಬೋಧನಾ ಕೌಶಲ ಹಾಗೂ ಆಡಳಿತ ನಿರ್ವಹಣೆಯನ್ನು ಗುರುತಿಸಿ ಈ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.  ಈ ಗೌರವಕ್ಕೆ ಕುಟುಂಬಸ್ಥರು, ಹಿತೈಷಿಗಳು ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ. 


ಸುದ್ದಿ ಓದಿ