ಸಂಪುಟ ವಿಸ್ತರಣೆ ವಿಳಂಬ: ಟ್ವೀಟ್ ಮೂಲಕ ಮುಖ್ಯಮಂತ್ರಿ ಕಾಲೆಳೆದ ಸಿದ್ದರಾಮಯ್ಯ
ಬೆಂಗಳೂರು, ಆ 3 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ವಿಳಂಬವನ್ನು ಮುಂದಿಟ್ಟು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಟ್ವೀಟ್ ಮೂಲಕ ಕಾಲೆಳೆದಿದ್ದಾರೆ. ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ ?, ಸಂಪುಟ ವಿಸ್ತರಣೆಯದ್ದೇ? ಎಂದು ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ ? ಅತಿವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ ? ಏಕಚಕ್ರಾಧಿಪತ್ಯವೇ ? ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ. ಮುಖ್ಯಮಂತ್ರಿಯ ಜೊತೆ ರಾಜ್ಯಪಾಲರನ್ನೂ ಟೀಕಿಸಿರುವ ಸಿದ್ದರಾಮಯ್ಯ, ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 