ಸಿದ್ಧೇಶ್ವರ ಶ್ರೀಗಳು ಅಧ್ಯಾತ್ಮದ ಮೇರು ಪರ್ವತ: ಆನಂದ ಹುಣಸಗಿ
Siddheshwara Sri is the pinnacle of spirituality: Ananda Hunasagi
ಇಂಡಿ 03: ಮನುಕುಲಕ್ಕೆ ಸುಂದರ ಬದುಕಿನ ದಾರಿ ತೋರಿದ ಜಗತ್ತಿನ ಶ್ರೇಷ್ಠ ಸಂತ ಸಿದ್ಧೇಶ್ವರ ಸ್ವಾಮೀಜಿಯವರ ಜೀವನ, ಚಿಂತನೆಗಳು ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಿಯಾಗಿವೆ ಎಂದು ಶಿಕ್ಷಣ ಸಂಯೋಜಕ ಆನಂದ ಹುಣಸಗಿ ಹೇಳಿದರು.
ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ 3ನೇ ಗುರುನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಅಧ್ಯಾತ್ಮದ ಮೇರು ಪರ್ವತ, ಸದ್ಗುಣಗಳ ಪ್ರತಿರೂಪವಾಗಿದ್ದ ಸಿದ್ದೇಶ್ವರ ಶ್ರೀಗಳು ಸರಳ ಜೀವನ, ಆಳವಾದ ಆಧ್ಯಾತ್ಮಿಕ ಜ್ಞಾನದೊಂದಿಗೆ ಜಾತಿ, ಮತ, ಪಂಥದ ಭೇದಭಾವವಿಲ್ಲದೆ ಎಲ್ಲರಿಗೂ ತತ್ವಶಾಸ್ತ್ರವನ್ನು ಅರ್ಥವಾಗುವ ಭಾಷೆಯಲ್ಲಿ ಪ್ರವಚನ ನೀಡಿ, ಮಾನವೀಯ ಸಮಾಜ ನಿರ್ಮಾಣಕ್ಕೆ ಆದ್ಯತೆ ನೀಡಿದ್ದರು ಎಂದರು.
ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸಿದ್ದ್ರೇಶ್ವರ ಶ್ರೀಗಳ ಜೀವನವೇ ಎಲ್ಲರಿಗೂ ಪ್ರೇರಣೆ. ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದ ಅವರನ್ನು ಕಂಡಾಗ ಚಿಂತೆ, ಕೋಪ-ತಾಪ, ಮರೆಯಾಗುತ್ತಿದ್ದವು. ಶ್ರೀಗಳ ತೆರೆದಿಟ್ಟ ಜೀವನ ಎಲ್ಲರ ಬದುಕಿಗೆ ದಾರೀದೀಪ. ಜತೆಗೆ ಅಮೂಲ್ಯವಾದ ಪುಸ್ತಕವೂ ಹೌದು ಎಂದು ಹೇಳುತ್ತಾ, ಸಂಕೀರ್ಣ ತಾತ್ವಿಕ ವಿಷಯಗಳನ್ನು ಸಾಮಾನ್ಯರಿಗೆ ಅರ್ಥವಾಗುವಂತೆ ಸರಳವಾಗಿ ವಿವರಿಸುವ ಅಸಾಧಾರಣ ಸಾಮರ್ಥ್ಯ ಹೊಂದಿದ್ದ ಸಿದ್ದೇಶ್ವರ ಶ್ರೀಗಳ ಜೀವನ ಮತ್ತುಸಂದೇಶವು ಜಗತ್ತಿಗೆ ದಾರೀದೀಪವಾಗಿದೆ ಎಂದು ಹೇಳಿದರು.
ಮುಖ್ಯ ಶಿಕ್ಷಕರಾದ ಕೆ ಆಯ್ ಮಕಾನದಾರ, ಅನಿಲ ಪತಂಗಿ, ಶಿಕ್ಷಕರಾದ ಎಸ್ ಎಸ್ ಅರಬ, ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಬೇಗಂ ಮುಲ್ಲಾ, ಕಮಲವ್ವ ದಳವಾಯಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 