ಗಾಯಕ ರವೀಂದ್ರ ಸೋರಗಾಂವಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ
Singer Ravindra Soragaon gets Karnataka Kalashri Award
ಮಹಾಲಿಂಗಪುರ 09 : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ 2025-26ನೇ ಸಾಲಿನ ಕರ್ನಾಟಕ ಕಲಾಶ್ರೀ ವಾರ್ಷಿಕ ಪ್ರಶಸ್ತಿಗೆ ಮಹಾಲಿಂಗಪುರದ ಹಿಂದೂಸ್ತಾನಿ ಶಾಸ್ತ್ರೀಯ ಮತ್ತು ಸುಗಮ ಸಂಗೀತ ಗಾಯಕ ಹಾಗೂ ಚಲನಚಿತ್ರ ಹಿನ್ನೆಲೆ ಗಾಯಕ ರವೀಂದ್ರ ಸೋರಗಾಂವಿ ಭಾಜನರಾಗಿದ್ದಾರೆ. ಇವರ ಗಾಯನ ಕಲಾ ಪ್ರಕಾರಕ್ಕಾಗಿ ಈ ಪ್ರಶಸ್ತಿ ನೀಡಲಾಗಿದ್ದು ಅಕಾಡೆಮಿ ಅಧ್ಯಕ್ಷೆ ಶುಭ ಧನಂಜಯ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆ ಮಾಡಲಾಯಿತು.ಈ ವಾರ್ಷಿಕ ಪ್ರಶಸ್ತಿ ಪುರಸ್ಕೃತ ರವೀಂದ್ರ ಅವರಿಗೆ ರೂ.25 ಸಾವಿರಗಳ ಚೆಕ್ ಹಾಗೂ ಪ್ರಶಸ್ತಿ ವಿಗ್ರಹ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವದು ಎಂದು ಅಕಾಡೆಮಿ ಅಧ್ಯಕ್ಷೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸ್ವಂತ ಕಲಾ ತಂಡ ಕಟ್ಟಿಕೊಂಡು 5 ದಶಕಗಳ ಕಾಲ ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದ ಮಹಾಲಿಂಗಪುರದ ಹೆಸರಾಂತ ಶ್ರೀಕೃಷ್ಣ ಪಾರಿಜಾತ ಕಲಾವಿದ ದಿ.ಮುರಿಗೆಪ್ಪ ಸೋರಾಂವಿ ಅವರ ಮೊಮ್ಮಗ ರವೀಂದ್ರ ಸೋರಗಾಂವಿ. ಇವರ ತಂದೆ ಸುಭಾಷ್ ಹಾರ್ಮೊನಿಯಂ ಕಲಾವಿದರು. ಚಿಕ್ಕಪ್ಪ ಶ್ರೀಶೈಲ ರಂಗಭೂಮಿ ಕಲಾವಿದರು.ಹೀಗೆ ಸೋರಗಾಂವಿಯರ ಇಡೀ ಕುಟುಂಬವೇ ಕಲಾವಿದರ ಕುಟುಂಬವಾದ್ದರಿಂದ ಇವರಿಗೆ ಕಲೆ ರಕ್ತಗತವಾಗಿಯೇ ಒಲಿದಿತ್ತು. ಮನೆಯೇ ಮೊದಲ ಪಾಠಶಾಲೆ, ತಾತನೇ ಮೊದಲ ಗುರುವಾಗಿದ್ದರು. 8ನೇ ವಯಸ್ಸಿನಲ್ಲಿಯೇ ಶ್ರೀ ಕೃಷ್ಣಪಾರಿಜಾತದಲ್ಲಿ ಬಾಲಗೋಪಾಲ, ನಾರದ ಪಾತ್ರಗಳನ್ನು ಮಾಡುತ್ತಾ ಹಾಡುಗಳನ್ನು ಹಾಡುತ್ತಾ ಕಲೆಯನ್ನು ಮೈಗೂಡಿಸಿಕೊಂಡಿದ್ದರು.
1987 ರಿಂದ ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ಧ್ವನಿ ಪರೀಕ್ಷೆಯಲ್ಲಿ ಪಾಸಾಗಿ, ಹಿಂದೂಸ್ಥಾನಿ ಶಾಸ್ತ್ರೀಯ ಹಾಗೂ ಸುಗಮ ಸಂಗೀತ ನೀಡಿದರು.ಹೈಗ್ರೇಡ್ ಕಲಾವಿದರಾಗಿ ನಿರಂತರವಾಗಿ ಆಕಾಶವಾಣಿ ಮತ್ತು ದೂರದರ್ಶನಗಳಲ್ಲಿ ಸಂಗೀತ ಕಾರ್ಯಕ್ರಮ ಕೊಡುತ್ತಾ ಸಂಗೀತ ಕ್ಷೇತ್ರದಲ್ಲಿ ಜನಪ್ರಿಯ ಕಲಾವಿದರಾದರು. ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇವರು ಲಂಡನ್, ಬಹರೆನ್, ಕತಾರ್ ದೇಶಗಳಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದಾರೆ. ಪುಟ್ಟಕ್ಕನ ಹೈವೇ ಚಿತ್ರದ ಹಿನ್ನೆಲೆ ಗಾಯನಕ್ಕಾಗಿ 2010-11ನೇ ಸಾಲಿನ ಅತ್ಯುತ್ತಮ ಹಿನ್ನೆಲೆ ಗಾಯಕ ರಾಜ್ಯ ಪ್ರಶಸ್ತಿ ಪಡೆದಿರುವ ಇವರು ಕಳೆದ 16 ವರ್ಷಗಳಲ್ಲಿ 200ಕ್ಕೂ ಅಧಿಕ ಚಲನಚಿತ್ರಗಳಿಗೆ ಹಿನ್ನೆಲೆ ಗಾಯನ ನೀಡಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 