ಅಂಬೇಡ್ಕರ್ ಸೇವಾಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಶಿವಕುಮಾರ್ ಆಯ್ಕೆ
ರಾಷ್ಟ್ರೀಯ ಪ್ರಶಸ್ತಿಗೆ ಶಿವಕುಮಾರ್ ಆಯ್ಕೆ
ಅಂಬೇಡ್ಕರ್ ಸೇವಾಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಶಿವಕುಮಾರ್ ಆಯ್ಕೆ
ಕಂಪ್ಲಿ 25: ತಾಲೂಕಿನ ದೇವಲಾಪುರ ಗ್ರಾಮದ ನಿವಾಸಿ ಭಾ.ದಲಿತ ಪ್ಯಾಂಥರ್ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮಾಜಿ ಗ್ರಾ.ಪಂ ಸದಸ್ಯ ಹಾಗೂ ವಿಎಸ್ ಕೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಕೀಲ ಶಿವಕುಮಾರ್ ಕೆ ಅವರು ನವದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನ "ಡಾ.ಅಂಬೇಡ್ಕರ್ ಸೇವಾಶ್ರೀ ರಾಷ್ಟ್ರೀಯ ಪ್ರಶಸ್ತಿ"ಗೆ ಆಯ್ಕೆಗೊಂಡಿದ್ದಾರೆ.
ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಮುಖಾಂತರ ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ದಲಿತ ಹಿಂದುಳಿದವರ ಪರವಾಗಿ ಮತ್ತು ಸಾಮಾಜಿಕ ಸಮಸ್ಯೆಗಳ ಕುರಿತಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬದವರಿಗೆ ವೈಯಕ್ತಿಕ ಹಣದಲ್ಲಿ ಬಡ ಮಕ್ಕಳಿಗೆ ಉಚಿತವಾಗಿ ಶಾಲಾ ಸಮವಸ್ತ್ರಗಳು, ಶೂಗಳು, ಪಠ್ಯಪುಸ್ತಕಗಳನ್ನ ಉಚಿತವಾಗಿ ನೀಡುತ್ತಿರುವುದು ಹಾಗೂ ಬಡ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಾಲೆ ನಡೆಸುವುದು ಹಾಗೂ ಉಚಿತವಾಗಿ ಕೋಚಿಂಗ್ ನೀಡುವುದು ಹಾಗೂ ದಲಿತ ಸಮುದಾಯದವರ ಪರ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಲವಾರು ಸಮಾಜ ಸೇವೆಗಳನ್ನ ಶಿವ ಕುಮಾರ್ ಕೆ ರವರು ಮಾಡಿಕೊಂಡು ಬಂದಿರುವುದನ್ನು ಪರಿಗಣಿಸಿ ಸದರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಡಿಸೆಂಬರ್ 8, 2024 ರಂದು ನವದೆಹಲಿಯಲ್ಲಿ ನಡೆಯುವ 40ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿಯ ರಾಷ್ಟ್ರ ಅಧ್ಯಕ್ಷ ಎಸ್.ಪಿ.ಸುಮನಾಕ್ಷರ್ ಪತ್ರದ ಮೂಲಕ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 