ಡಿಎಂಎಫ್ ಅಡಿ ಅರಣ್ಯ ಅಭಿವೃದ್ಧಿಗೆ ವಿಶೇಷ ಒತ್ತು
ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿಕೆ | ಬಳ್ಳಾರಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ
ಬಳ್ಳಾರಿ05: ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ನಿಮಿತ್ತ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಬಳ್ಳಾರಿ ಅರಣ್ಯ ವಿಭಾಗ ಮತ್ತು ವೀರಶೈವ ಕಾಲೇಜು ಸಹಯೋಗದಲ್ಲಿ ನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ವೀರಶೈವ ಕಾಲೇಜು ಆವರಣದಲ್ಲಿ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿದರು.
ಕಾಲೇಜು ಆವರಣದಲ್ಲಿ ಕೆಲ ಸಸಿಗಳನ್ನು ನೆಟ್ಟ ಜಿಲ್ಲಾ ಉಸ್ತುವಾರಿ ಸಚಿವರು ನೆರೆದಿದ್ದವರಿಗೆಲ್ಲ ಪರಿಸರ ದಿನಾಚರಣೆಯ ಶುಭಾಷಯಗಳನ್ನು ಕೋರಿದರು. ಇದೇ ಸಂದರ್ಭದಲ್ಲಿ ಪರಿಸರ ಜಾಗೃತಿ ರ್ಯಾಲಿಗೂ ಸಹ ಚಾಲನೆ ನೀಡಿದರು.
ವಿದ್ಯಾಥರ್ಿಗಳು ಕೈಯಲ್ಲಿಡಿದಿದ್ದ ಪರಿಸರ ಸಂರಕ್ಷಣೆ ಮತ್ತು ಪರಿಸರದ ಮಹತ್ವ ಸಾರುವ ಘೋಷಣಾ ಫಲಕಗಳು ಮತ್ತು ಘೋಷಣೆಗಳು ಗಮನಸೆಳೆದವು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಂತರ ಕುವೆಂಪು ನಗರದ ಕನರ್ಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಯುಕ್ತ ಆಶ್ರಯದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಜಿಲ್ಲಾ ಖನಿಜ ನಿಧಿಯ ಅನುದಾನ ಬಳಸಿಕೊಂಡು ಬಳ್ಳಾರಿ ಜಿಲ್ಲೆಯಲ್ಲಿ ಅರಣ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಮತ್ತು ಪರಿಸರ ಉಳಿಸಿ-ಬೆಳೆಸುವುದಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು.
ಮರ ಗಿಡಗಳನ್ನು ಬೆಳೆಸಬೇಕು ಮತ್ತು ನೀರನ್ನು ಸಂರಕ್ಷಿಸುವ ಕೆಲಸ ಮಾಡಬೇಕು;ಇದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅನೇಕ ಪ್ರಯತ್ನಗಳು ನಡೆಯುತ್ತಿದ್ದು, ಅವುಗಳಿಗೆ ಸಾಥ್ ನೀಡಬೇಕಿದೆ. ಪರಿಸರ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರದ ಜೊತೆಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದರು.
ಪ್ರತಿಯೊಬ್ಬರು ತಮ್ಮ ಮನೆಗಳ ಮುಂದೆ ಒಂದು ಗಿಡವನ್ನು ನೆಡುವುದರ ಮೂಲಕ ಅದನ್ನು ಪೋಷಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ವಿವರಿಸಿದ ಅವರು ದೇಶದ 21 ರಾಜ್ಯಗಳಲ್ಲಿ ಅರಣ್ಯ ಪ್ರದೇಶ ಕಡಿಮೆಯಾಗುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ ಎಂದರು.
ಸುಭದ್ರ ಅಥರ್ಿಕತೆ ಜೊತೆಗೆ ಸುಭದ್ರ ಮತ್ತು ಸುಸ್ಥಿರ ಪರಿಸರಕ್ಕೂ ಪ್ರಧಾನಮಂತ್ರಿಗಳು ಒತ್ತು ನೀಡಿದ್ದಾರೆ. ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರಿಸರ ಸ್ನೇಹಿ ಬಜೆಟ್ ಮಂಡಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್, ಬುಡಾ ಅಧ್ಯಕ್ಷ ಪಾಲನ್ನ, ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಬಳ್ಳಾರಿ ಉಪ ಅರಣ್ಯಸಂರಕ್ಷಣಾಧಿಕಾರಿ ಸಂದೀಪ್ ಎಚ್.ಸೂರ್ಯವಂಶಿ, ವೀರಶೈವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ದರೂರು ಶಾಂತವೀರನಗೌಡ, ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಟಿ.ಪಾಟೀಲ್, ಕನರ್ಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ದೊಡ್ಡಶಾನಯ್ಯ,ಮಾಜಿ ಸಂಸದೆ ಜೆ.ಶಾಂತಾ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು,ವಿದ್ಯಾಥರ್ಿಗಳು,ಸಾರ್ವಜನಿಕರು ಹಾಗೂ ಅಧಿಕಾರಿಗಳು ಸೇರಿದಂತೆ ಇನ್ನೀತರರು ಇದ್ದರು.
ನಂತರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಬಳ್ಳಾರಿ ಹೊರವಲಯದ ಹಲಕುಂದಿ ಪೊಲೀಸ್ ಫೈರಿಂಗ್ ರೇಂಜ್ ಆವರಣದಲ್ಲಿ ಸಸಿಗಳನ್ನು ನೆಟ್ಟರು. ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಬಳ್ಳಾರಿ ಉಪ ಅರಣ್ಯಸಂರಕ್ಷಣಾಧಿಕಾರಿ ಸಂದೀಪ್ ಎಚ್.ಸೂರ್ಯವಂಶಿ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರು.