ಸುಭಾಸ್ ಗೊಡ್ಯಾಗೋಳಗೆ ರಾಜ್ಯ ಯುವ ಪ್ರಶಸ್ತಿ
State Youth Award to Subhas Godyagol
ಸುಭಾಸ್ ಗೊಡ್ಯಾಗೋಳಗೆ ರಾಜ್ಯ ಯುವ ಪ್ರಶಸ್ತಿ
ಗುರ್ಲಾಪೂರ 31 : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಯನ್ನು ಮೂಡಲಗಿ ತಾಲೂಕಿನ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಷ್ ಗೊಡ್ಯಾಗೋಳ ನೀಡಿ ಗೌರವಿಸಲಾಗಿದೆ.
ಇತ್ತಿಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸವಣೂರು ಪಟ್ಟಣದಲ್ಲಿ ಇತ್ತೀಚೆಗೆ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ಯುವ ಸಮ್ಮೇಳನ ಮತ್ತು ರಾಜ್ಯ ಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಳೆದ 12 ವರ್ಷಗಳಿಂದ ಗ್ರಾಮೀಣ ಕ್ರೀಡೆ, ಕಲೆ, ಸಾಹಿತ್ಯ, ಪರಿಸರ ಸಂರಕ್ಷಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಿರಂತರ ಯುವ ಸಂಘಟನೆ, ಜನ ಜಾಗೃತಿಯಂತಹ ಸಮಾಜ ಸೇವಾ ಕಾರ್ಯವನ್ನು ಪರಿಗಣಿಸಿ 2024 - 25ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ರಾಜ್ಯದ 31ಜಿಲ್ಲೆಯ ಸಮಾಜ ಸೇವಕರನ್ನು ಗುರುತಿಸಿ, ಗೌರವಿಸಲಾಗಿದ್ದು ಬೆಳಗಾವಿ ಜಿಲ್ಲೆಯ ಮೂಡಲಗಿಯ ಸುಭಾಸ್ ಗೊಡ್ಯಾಗೋಳ ಪ್ರಶಸ್ತಿ ಪಡೆದುಕೊಂಡರು.
ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ಪುತ್ತೂರು ಶಾಸಕಿ ಭಾಗೀರಥಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ಬಾಲಾಜಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಜಿಲ್ಲಾಧ್ಯಾಕ್ಷ ಸಿದ್ದಣ್ಣ ದುರದುಂಡಿ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುಧೀರ ನಾಯರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 