ಲಕ್ಷ್ಮೀಪುತ್ರ ಕಿರನಳ್ಳಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
State-level Best Teacher Award for Lakshmiputra Kiranalli
ಆಲಮೇಲ 29 : ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಶಾಲೆಯ ಮುಖ್ಯ ಶಿಕ್ಷಕ ರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಭಾನುವಾರ ಕಂದಗಲ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಲಕ್ಷ್ಮೀಪುತ್ರ ಕಿರನಳ್ಳಿ ರವರಿಗೆ ಶೈಕ್ಷಣಿಕ, ಸಾಮಾಜಿಕ ಹಾಗೂ ಸಂಘಟನಾತ್ಮಕ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಪ್ರಶಸ್ತಿಯನ್ನು ಮಾಜಿ ಸಭಾಪತಿಗಳು ಹಾಗೂ ಮಾಜಿ ಶಿಕ್ಷಣ ಸಚಿವರಾದ ಬಸವರಾಜ ಹೊರಟ್ಟಿ , ಸಚಿವರಾದ ರುದ್ರ್ಪ ಲಮಾಣಿ, ಶಾಸಕರಾದ ಹಣಮಂತ ನಿರಾಣಿ, ಚಂದ್ರಶೇಖರ ನುಗ್ಲಿ ಜಿ.ಹನುಮಂತಪ್ಪ,ರಾಜಾಧ್ಯಕ್ಷ ಶಿವಾನಂದ ಹಿರೇಕುರುಬರ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಮ್.ಕೆ.ರಾಜು,ಜಿಲ್ಲಾಧ್ಯಕ್ಷ ಗೀರೀಶ ಬಿರಾದಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಗುಳೇದಗುಡ್ಡ ಮುಂತಾದವರು ಕ್ಷೇತ್ರ ಶಿಕ್ಷಣಾಧಿಕಾರಿ ಆರಿ್ವ.ಹೊಸೂರ ಮುಂತಾದವರು ಪ್ರಶಸ್ತಿ ಪ್ರಧಾನ ಮಾಡಿದರು.ಪ್ರಶಸ್ತಿ ಲಭಿಸಿದಕ್ಕೆ ಸಂಸ್ಥೆಯ ಅಧ್ಯಕ್ಷ ಎಸ್.ಆಯ್.ಜೋಗೂರ,ಕಾರ್ಯದರ್ಶಿ ಪ್ರಶಾಂತ ಬಡದಾಳ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕವೃಂದದವರು ಹರ್ಷ ವ್ಯಕ್ತ ಪಡಿಸಿದರು.
ಅಂಗಾರಕ ಸಂಕಷ್ಟಿ : ನೀಲಗಾರ ಗಣೇಶ ದರ್ಶನಕ್ಕೆ ಬೀಗಿ ಬಂದೋಬಸ್ತ್ : ಭಕ್ತರ ಸಂಖ್ಯೆ ಇಳಿಮುಖ
ಹಳೇ ವೈಷಮ್ಯ: ವ್ಯಕ್ತಿಯ ಅಪಹರಣ, ಕೊಲೆ: ನಾಲ್ವರು ಆರೋಪಿಗಳ ಬಂಧನ
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ 