ಶಿಕ್ಷಣ ಉಳಿವಿಗಾಗಿ ಜು.7ರಂದು ರಾಜ್ಯಮಟ್ಟದ ಪ್ರತಿಭಟನಾ ಸಮಾವೇಶ
State-level protest rally on July 7 to save education
ಹಾವೇರಿ, ಜು.6: ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ ಎಡ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಜುಲೈ 7ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯಮಟ್ಟದ ಪ್ರತಿಭಟನಾ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಭಾಗವಹಿಸಲು ಹಾವೇರಿ ಜಿಲ್ಲೆಯ ಎಸ್ಎಫ್ಐ ಕಾರ್ಯಕರ್ತರು ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು, ಎನ್ಟಿಎ ಹಾಗೂ ನೀಟ್ ವ್ಯವಸ್ಥೆಯ ಸುಧಾರಣೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಯ ಮರುಪರೀಶೀಲನೆ ಹಾಗೂ ಶಿಕ್ಷಣ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಈ ಪ್ರತಿಭಟನೆ ಆಯೋಜಿಸಲಾಗಿದೆ.
ಎಐಎಸ್ಎಫ್ , ಎಸ್ಎಫ್ಐ , ಎಐಡಿಎಸ್ಒ ಮತ್ತು ಎಐಎಸ್ಎ ಸಂಘಟನೆಗಳು ಸಮಾವೇಶವನ್ನು ಆಯೋಜಿಸಿದ್ದು, ಹಿರಿಯ ಸಾಹಿತಿಗಳು, ಶಿಕ್ಷಣ ತಜ್ಞರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಹಾಸ್ಟೆಲ್ ವಿದ್ಯಾರ್ಥಿಗಳ ಸಂಚಾಲಕ ಅರುಣ್ ಕುಮಾರ್ ನಗವತ್, ಜಿಲ್ಲಾ ಮುಖಂಡ ರಘು ಅಂಗಡಿ, ಪಂಚಾಕ್ಷರಿ ಕೋಟಿಹಾಳ, ಹರೀಶ್ ನಾಯಕರ್, ಹೇಮಂತ್ ನಾಯಕರ್, ಶೋಭಾ ದೇವರಮನಿ, ನವೀನ್ ಅಂಗಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 