ರಸ್ತೆ ಸುರಕ್ಷತೆ ಕುರಿತು ಬೀದಿ ನಾಟಕ ಪ್ರದರ್ಶನ
Street drama performance on road safety
ರಸ್ತೆ ಸುರಕ್ಷತೆ ಕುರಿತು ಬೀದಿ ನಾಟಕ ಪ್ರದರ್ಶನ
ಯಮಕನಮರಡಿ 29 : ಇತ್ತಿಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚುಹೆಚ್ಚಿಗೆ ನಡೆಯುತ್ತಿದ್ದು ಈ ಕುರಿತು ಪ್ರಯಾಣಿಕರು ಹಾಗೂ ಪಾದಚಾರಿಗಳಿಗೆ ವಾಹನ ಚಾಲಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಾರಿಗೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿವಿಧ ಸ್ಥಳಗಳಲ್ಲಿ ಬೀದಿ ನಾಟಕದ ಮೂಲಕ ರಸ್ತೆ ಸುರಕ್ಷತೆ ಕುರಿತು ಕಾರ್ಯಕ್ರಮ ಆಯೋಜಿಸಲಾಗಿತ್ತು. ಹತ್ತರಗಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ಹತ್ತರಗಿ ಟೂಲ್ ನಾಕಾ ಆವರಣದಲ್ಲಿ ದಿ 28 ರಂದು ದುಳಗನವಾಡಿ ಕಲಾ ತಂಡದಿಂದ ಬೀದಿ ನಾಟಕ ಪ್ರದರ್ಶನವನ್ನು ಮಹಿಳಾ ಮಕ್ಕಳ ಕಲ್ಯಾಣ ಸಂಸ್ಥೆ ಬೆಳಗಾವಿ ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ರಾಷ್ಟ್ರೀಯ ಹೆದ್ದಾರಿ ಮುಖ್ಯಸ್ಥರಾದ ರವೀಂದ್ರ ವಾದ್ಯ ನುಡಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನಿಡಿದರು. ಸುರೇಖಾ ಪಾಟೀಲ , ಪ್ರಸಾದಗಿರಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 