ವಿದ್ಯಾರ್ಥಿ ಸಾಧನೆ: ಅಥ್ಲೆಟಿಕ್ಸ್ ತಂಡಕ್ಕೆ ಆಯ್ಕೆ
Student Achievement: Selection to the Athletics Team
ಮೂಡಲಗಿ 24: ಇಲ್ಲಿಯ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ (ಬಿ.ಎಸ್.ಡ್ಲ್ಯೂ) ಮೂರನೆಯ ಸೆಮಿಸ್ಟರ್ ವಿದ್ಯಾರ್ಥಿ ತಾಹೀರ ಹುಸೇನ ಅವರು 100 ಮೀಟರ್ ವಿಭಾಗದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಥ್ಲೆಟಿಕ್ಸ್ ತಂಡಕ್ಕೆ (ಯೂನಿವರ್ಸಿಟಿ ಬ್ಲ್ಯೂ) ಆಯ್ಕೆಯಾಗುವ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ. ಇವರು 100 ಮೀಟರ್ ಓಟವನ್ನು ಕೇವಲ 10.85 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿ ಈ ಸಾಧನೆಯನ್ನು ಮಾಡಿರುತ್ತಾರೆ. ಇವರ ಈ ಸಾಧನೆಗೆ ಮಹಾವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಬಾಲಚಂದ್ರ ಜಾರಕಿಹೊಳಿ, ಸರ್ವ ಸದಸ್ಯರು, ಪ್ರಾಂಶುಪಾಲರಾದ ಶ್ರೀಯುತ ಮಹೇಶ ಕಂಬಾರ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶುಭ ಕೋರಿರುತ್ತಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 