ಜಮಖಂಡಿ

ರಾಜ್ಯ ಮಟ್ಟಕ್ಕೆ ವಿದ್ಯಾರ್ಥಿನಿ ಸಂಜನಾ ಆಯ್ಕೆ

ರಾಜ್ಯ ಮಟ್ಟಕ್ಕೆ ವಿದ್ಯಾರ್ಥಿನಿ ಸಂಜನಾ ಆಯ್ಕೆ
ತಾಲೂಕಿನ ಆಲಗೂರು ಶಾಲೆಯ ಸಂಜನಾ ಮಿರ್ಜಿ ಪ್ರಥಮ ಸ್ಥಾನ ಪಡೆದುಕೊಂಡ ವಿದ್ಯಾರ್ಥಿ ನಿ

ಜಮಖಂಡಿ 09: ಜಿಲ್ಲಾ ಉಪನಿರ್ದೇಶಕರು ಮತ್ತು ಜಿಲ್ಲಾ ಯೋಜನಾ ಸಮನ್ವಯಧಿಕಾರಿಗಳು ಸಮಗ್ರ ಶಿಕ್ಷಣ ಕರ್ನಾಟಕ ಇವರು ಮತದಾರರ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮಕ್ಕಳಿಗಾಗಿ ಜಿಲ್ಲಾ ಮಟ್ಟದ ಭಿತ್ತಿಚಿತ್ರ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಈ ಸ್ಪರ್ಧೆಯಲ್ಲಿ ತಾಲೂಕಿನ ಆಲಗೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸಂಜನಾ ಮಿರ್ಜಿ  ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆಂದು ಮುಖ್ಯಶಿಕ್ಷಕ ಎ.ಜೆ. ಬಾರಸಕಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸುದ್ದಿ ಓದಿ