ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭ
Student welcome and cultural activities ceremony
ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭ
ರಾಣೇಬೆನ್ನೂರು 04: ಶಾಂತಿ ಮತ್ತು ನೆಮ್ಮದಿಯ ಭವ್ಯ ಭಾರತ ಇಂದಿನ ಜಾತಿಯ ವ್ಯವಸ್ಥೆಯಲ್ಲಿ ಹಾಳಾಗುತ್ತಲ್ಲಿದೆ ಎಂದು ಕರ್ನಾಟಕ ಬಾಲ ಅಕಾಡೆಮಿ ಅಧ್ಯಕ್ಷ ಧಾರವಾಡದ ಸಂಗಮೇಶ್ ಬಬಲೇಶ್ವರ ಹೇಳಿದರು. ಅವರು ಗುರುವಾರ ಇಲ್ಲಿನ ಪಂಪಾಪತಿ ಸಭಾಭವನದಲ್ಲಿ ಕೆಎಲ್‌ಎ ಶಿಕ್ಷಣ ಸಂಸ್ಥೆಯ ರಾಜರಾಜೇಶ್ವರಿ ಕಲಾ ವಾಣಿಜ್ಯ ವಿದ್ಯಾಲಯದ 2025-26 ನೇ ಸಾಲಿನ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸ್ಪರ್ಧಾತ್ಮಕ ಅವಕಾಶಗಳು ಎಲ್ಲಿಯೇ ಸಿಗಲಿ ಅದರಲ್ಲಿ ಪಾಲ್ಗೊಳ್ಳುವುದಕ್ಕೆ ವಿದ್ಯಾರ್ಥಿ ವ್ಯಕ್ತಿತ್ವವನ್ನು ವಿಕಸನಗೊಳಿಸಲು ತುಂಬಾ ಸಹಕಾರಿಯಾಗಲಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ, ಕಾರ್ಯಾಧ್ಯಕ್ಷ ವ್ಹಿ.ಪಿ. ಲಿಂಗನಗೌಡ್ರು ಅವರು,ಕೆ. ಎಲ್. ಇಶಿಕ್ಷಣ ಸಂಸ್ಥೆಯು, ಮಕ್ಕಳ ಸರ್ವಾಗಿಣ, ಶಿಕ್ಷಣ ಅಭಿವೃದ್ಧಿಗೆ ದೂರ ದೃಷ್ಟಿ ಇಟ್ಟುಕೊಂಡು ಸೇವೆ ಸಲ್ಲಿಸುತ್ತಲಿದೆ. ದೇಶ ವಿದೇಶಗಳಲ್ಲಿ ಶಿಕ್ಷಣ ರಂಗದಲ್ಲಿ ಕ್ರಾಂತಿ ಮಾಡಿ ಬೆಳೆಯುತ್ತಲ್ಲಿದೆ ಅದುವೆ ನಮ್ಮಯ ಹೆಮ್ಮೆ ಎಂದರು. ಪ್ರಾಚಾರ್ಯ ನಾರಾಯಣ ನಾಯಕ್ ಎ, ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷ ನಾಗರಾಜ ಗವಿಯಪ್ಪನವರ, ಕಾರ್ಯದರ್ಶಿ ಯಶಸ್ವಿನಿ ಜ್ಯೋತಿಬಣ್ಣದ, ಐ ಕ್ಯೂ ಎಸಿ ಸಂಯೋಜಕಿ ಸಾಯಿಲತಾ ಮಡಿವಾಳರ, ಎನ್‌ಎಸ್‌ಎಸ್ ಯೋಜನಾಧಿಕಾರಿ ಕೃಷ್ಣ ಎಲ್. ಹೆಚ್. ರೇಖಾ ಶಿಡೇನೂರ, ವಿದ್ಯಾಶ್ರೀ, ರತ್ನ ಸೇರಿದಂತೆ ಮತ್ತಿತರ ಗಣ್ಯರು ವಿವಿಧ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ಪ್ರೊ, ವಿದ್ಯಾಶ್ರೀ ದಾಮೋದರ ಪ್ರಾರ್ಥಿಸಿದರು. ಪ್ರಾಚಾರ್ಯ ನಾರಾಯಣ ನಾಯಕ್ ಎ, ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಫ್ರಿನ್ ಕಿತ್ತೂರ್ ರೋಹಿಣಿ ಕರಡಿಮಠ ನಿರೂಪಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ಪ್ರಬಂಧ,ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ, ಪ್ರಮಾಣ ಪತ್ರ, ಮತ್ತು ನಗದು ಮೊತ್ತ ವಿತರಿಸಿ ಗೌರವಿಸಲಾಯಿತು. ಕ್ಯಾಂಪಸ್ಸ್ ಸಂದರ್ಶನದಲ್ಲಿ ಎಂಎನ್ಸಿ,ಕಂಪನಿಯಲ್ಲಿ ಉದ್ಯೋಗ ಪಡೆದ ಕಾಲೇಜಿನ20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಭಿನಂದಿಸಿದರು. ನಂತರ ನಡೆದ ವಿದ್ಯಾರ್ಥಿಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಗಮನ ಸೆಳೆದವು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 