ತ್ರೋಬಾಲ್ ಪಂದ್ಯಾವಳಿಯಲ್ಲಿ ವಿದ್ಯಾರ್ಥಿನಿಯರ ಸಾಧನೆ
ಲೋಕದರ್ಶನ ವರದಿ
ಗುರ್ಲಾಪೂರ ಸೆ.10: ಗ್ರಾಮದ ಪಿ.ಎಂ. ಶಾಸಕರ ಮಾದರಿ ಶಾಲೆಯ ವಿದ್ಯಾರ್ಥಿನಿಯರು ಇತ್ತೀಚೆಗೆ ನಾಗನೂರಿನ ಮೇಘಾ ಶಾಲೆಯಲ್ಲಿ ನಡೆದ ತ್ರೋಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪಂದ್ಯಾವಳಿಯಲ್ಲಿ ಶಾಲೆಯ ಬಾಲಕಿಯರು ಉತ್ತಮ ಪ್ರದರ್ಶನ ನೀಡಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಶಾಲೆಗೆ ಹೆಮ್ಮೆ ತಂದಿದೆ. ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ ಲಕ್ಷ್ಮಯ್ಯ ಸಾಲಿಮಠ ಹಾಗೂ ಬಿ.ವೈ. ಮೊಮಿನ್ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಸಾಧ್ಯವಾಗಿದೆ.
ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಮುಖ್ಯೋಪಾಧ್ಯಾಯ ಬಸವರಾಜ ಸಸಾಲಟ್ಟಿ, ಶಿಕ್ಷಕ ವೃಂದ ಮತ್ತು ಅಡುಗೆ ಸಿಬ್ಬಂದಿ ವಿದ್ಯಾರ್ಥಿನಿಯರನ್ನು ಅಭಿನಂದಿಸಿ, ಕ್ರೀಡೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಿ ಶಾಲೆ ಮತ್ತು ಊರಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.