ಸಾರ್ವಜನಿಕ ಶಿಕ್ಷಣ ಉಳಿಸಲು ವಿದ್ಯಾರ್ಥಿಗಳು ಹೋರಾಡಬೇಕು
Students must fight to save public education
ಲೋಕದರ್ಶನ ವರದಿ
ಧಾರವಾಡ 06: ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ನಗರದ ಕೆಪಿಎಸ್ ಶಾಲೆಯಲ್ಲಿ ಜಿಲ್ಲಾ ಮಟ್ಟದ ವಿದ್ಯಾರ್ಥಿ ಶಿಬಿರ ಆಯೋಜಿಸಲಾಗಿತ್ತು. ಶಿಬಿರ ಉದ್ಘಾಟಿಸಿ ಮಾತನಾಡಿದ ರಾಜ್ಯ ಅಧ್ಯಕ್ಷ ಅಶ್ವಿನಿ ಕೆ.ಎಸ್. ಸಾಮಾಜಿಕ ಬದಲಾವಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ. ಅನ್ಯಾಯದ ವಿರುದ್ಧ ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸುವ ಬದಲು ಸರ್ಕಾರಿ ಶಾಲೆಗಳನ್ನು ಮುಚ್ಚುವ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಶಿಕ್ಷಣ ಎಲ್ಲರಿಗೂ ಸಮಾನವಾಗಿ ದೊರೆಯಬೇಕು ಎಂಬ ಜ್ಯೋತಿಬಾ ಫುಲೆ ಅವರ ಆಶಯವನ್ನು ಮುಂದುವರಿಸಬೇಕಿದೆ ಎಂದರು.
ಸರ್ಕಾರಿ ಶಾಲೆಗಳ ಮೂಲಸೌಕರ್ಯ, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಉದ್ಯೋಗಾವಕಾಶಗಳ ಕುರಿತು ಸರ್ಕಾರಗಳು ಹೆಚ್ಚಿನ ಗಮನ ನೀಡಬೇಕು ಎಂದು ಒತ್ತಾಯಿಸಿದರು. ಶಿಕ್ಷಣದ ವ್ಯಾಪಾರೀಕರಣದ ವಿರುದ್ಧ ಹಾಗೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ರಕ್ಷಣೆಗೆ ವಿದ್ಯಾರ್ಥಿಗಳು ಸಂಘಟಿತವಾಗಿ ಧ್ವನಿ ಎತ್ತಬೇಕು ಎಂದು ಅವರು ಕರೆ ನೀಡಿದರು. ಶಿಬಿರದಲ್ಲಿ ವಿದ್ಯಾರ್ಥಿಗಳಿಗಾಗಿ ಗುಂಪು ಚರ್ಚೆ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮಾ ಪ್ರದರ್ಶನ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ವಿನಯ ಚಂದ್ರ, ಜಿಲ್ಲಾ ಅಧ್ಯಕ್ಷ ಸಿಂಧು ಕೌದಿ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 