ಬೂದಿಹಾಳ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಲೋಕದರ್ಶನ ವರದಿ
ಬೈಲಹೊಂಗಲ 28: 2023-24 ನೇ ಸಾಲಿನ ಬೈಲಹೊಂಗಲ ತಾಲೂಕಾ ಮಟ್ಟದ ಕ್ರೀಡಾಕೂಟಗಳಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅಭಿಲಾಷ ಹೊಂಗಲ (800 ಮೀ ಓಟ ಪ್ರಥಮ), ಕಲ್ಮೇಶ ಗುಡ್ಡದ (600 ಮೀ ಓಟ ಪ್ರಥಮ, ಉದ್ದ ಜಿಗಿತ ಪ್ರಥಮ) ಸ್ಥಾನಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ಮೌನೇಶ ಗರಗದ (400 ಮೀ ತೃತೀಯ) ಹಾಗೂ ಬಾಲಕರ ರಿಲೇ ತಂಡ ದ್ವಿತೀಯ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳ ಸಾಧನೆಗೆ ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ, ಶಿಕ್ಷಕರಾದ ಜೆ.ಆರ್.ನರಿ, ಆರ್ಸಿ.ಸೊರಟೂರ, ಎಚ್.ವಿ.ಪುರಾಣಿಕ, ಎಸ್.ವಿ.ಬಳಿಗಾರ, ವಿ.ಬಿ.ಪಾಟೀಲ, ಎಸ್.ಬಿ.ಹತ್ತರಕಿ ಹಾಗೂ ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಪಿ.ಎಸ್.ಗುರುನಗೌಡರ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು