ಬೈಲಹೊಂಗಲ: ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸ್ಪಷ್ಟ ಇರಬೇಕು
ಲೋಕದರ್ಶನ ವರದಿ
ಬೈಲಹೊಂಗಲ 08: ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸ್ಪಷ್ಟ ಗುರಿ ಮತ್ತು ಆತ್ಮ ವಿಶ್ವಾಸ ಇರಬೇಕು ಎಂದು ನಿಮಾನ್ಸ್ ಯುವ ಸ್ಪಂದನ ಪರಿವರ್ತಕ ವೀರೇಶ ರಾಮದುರ್ಗ ಹೇಳಿದರು.
ಅವರು ತಾಲೂಕಿನ ಬೆಳವಡಿ ಗ್ರಾಮದ ವೀರರಾಣಿ ಮಲ್ಲಮ ಸ್ಮಾರಕ ಸಂಯುಕ್ತ ಪದವಿ ಪೂರ್ವ ಮಹಾ ವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸಂಯುಕ್ತಾಶ್ರಯದಲ್ಲಿ ಮಲ್ಲಮ್ಮ ಸ್ಮಾರಕ ಭವನದಲ್ಲಿ ನಡೆದ ಜೀವನ ಕೌಶಲ್ಯ ಹಾಗೂ ಯುವ ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಮುಂದಿನ ಜೀವನ ಸುಖವಾಗಿರಬೇಕೆಂದರೆ ಈಗ ಕಷ್ಟ ಪಡಲೆಬೇಕು. ಇದು ಸಾಧ್ಯವಾಗಬೇಕಾದರೆ ನಡೆ ನುಡಿಗಳಲ್ಲಿ ಶುದ್ಧತೆ ಕಾಪಾಡಿಕೊಂಡು ಸಂಸ್ಕಾರದ ಗುಣ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸ್ವ ಸಾಮಥ್ರ್ಯದ ಮೇಲೆ ನಂಬಿಕೆ ಇಟ್ಟುಕೊಳ್ಳಬೇಕು ಎಂದು ವಿದ್ಯಾಥರ್ಿಗಳಿಗೆ ಕಿವಿಮಾತು ಹೇಳಿದರು. ಪ್ರಾಚಾರ್ಯ ಎನ್.ಸಿ.ಯರಗಂಬಳಿಮಠ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕರಾದ ಬಿ.ಕೆ.ಕೊಟಬಾಗಿ,ಎಮ್.ಜಿ.ಹಿರೇಮಠ ವೇದಿಕೆ ಮೇಲಿದ್ದರು. ಉಪನ್ಯಾಸಕರಾದ ಮಹಾಂತೇಶ ಉಪ್ಪಿನ ಸ್ವಾಗತಿಸಿದರು. ಬಿ.ಎಫ್.ಬಾಟನವರ ವಂದಿಸಿದರು. ಪಿಯು ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 