ವಿದ್ಯಾರ್ಥಿಗಳು ಐ.ಎ.ಎಸ್., ಐ.ಪಿ.ಎಸ್ ಗಳಾಗಬೇಕು: ಜಿಲ್ಲಾಧಿಕಾರಿ.
Students should become IAS and IPS: District Collector.
ಕಾರವಾರ, ನ.12:- ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಅಗಾಧವಾದ ಶಕ್ತಿ-ಸಾಮರ್ಥ್ಯ ಇದ್ದು, ನಿರಂತರ ಶ್ರಮಪಟ್ಟರೇ ಋಖ, ಋಖ ಆಗಲು ಸಾಧ್ಯವಿದೆ. ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಸದಾ ಬೆಂಬಲ ನೀಡಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಕುರಿತು ಕಾಲೇಜಿನಲ್ಲಿ ಕಾರ್ಯಗಾರ ಹಮ್ಮಿಕೊಳ್ಳುವುದಾಗಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು.
ಅವರು ಮಂಗಳವಾರ ಕಾರವಾರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ನಲ್ಲಿ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ಎನ್.ಸಿ.ಸಿ, ರೋವರ್ಸ್-ರೇಂಜರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ಉದ್ಘಾಟನೆ ನರೆವೇರಿಸಿ ಮಾತನಾಡಿದರು.
ಜೀವನದ ಪಯಣದಲ್ಲಿ ಅನೇಕ ಸಮಸ್ಯೆಗಳ ಸರಮಾಲೆಗಳು ಎದುರಾಗಲಿದ್ದು, ಇವುಗಳನ್ನು ಎದುರಿಸಿ ತಮ್ಮ ಗುರಿ ಸಾಧನೆಗೆ ಪ್ರಯತ್ನಿಸಬೇಕು ಎಂದು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಪ್ರಾಂಶುಪಾಲರಾದ ಗೀತಾ ವಾಲೇಕರ್, ವಾರ್ಷಿಕ ಸಂಚಿಕೆಯ ಸಂಚಾಲಕ ಡಾ. ಬಸವರಾಜ ದಳವಾಯಿ, ಐ.ಕ್ಯೂ.ಎ.ಸಿ. ಸಂಚಾಲಕ ವಿಜಯಶ್ರೀ ಎಸ್. ಗಾಂವಕರ , ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಾ. ಶಿವಾನಂದ ನಾಯಕ, ಖಜಾಂಜಿ ಪ್ರಕಾಶ್ ರಾಣೆ ಮತ್ತಿತರರು ಉಪಸ್ಥಿತರಿದ್ದರು.
ಕಲಾವೇದಿಕೆಯ ಸಂಚಾಲಕಿ ಡಾ. ಮುನಿರತ್ನಮ್ಮ ಎಲ್.ಎಂ, ಸ್ವಾಗತಿಸಿದರು. ಯುನಿಯನ್ ಕಾರ್ಯಾಧ್ಯಕ್ಷ ಡಾ. ಮಹೇಂದ್ರಕುಮಾರ್ ಸಿ. ವಂದಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ವನಿತಾ ಜಿ. ದೇಶಭಂಡಾರಿ ನಿರೂಪಿಸಿದರು.
ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ವಾರ್ಷಿಕ ಸಂಚಿಕೆ ‘ವಿಶ್ವಂಭರ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಬೋಧಕ/ಬೋಧಕೇತರ ಸಿಬ್ಬಂದಿಗಳು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 