ಸಾವಯವ ಕೃಷಿಯಿಂದ ಕಬ್ಬು ಬೆಳೆ ಆರೋಗ್ಯಕರ: ಡಾ. ಮಂಜುನಾಥ ಚವರಡ್ಡಿ
Sugarcane grown through organic farming is healthier: Dr. Manjunatha Chavaraddi
ಲೋಕದರ್ಶನ ವರದಿ
ಮಾಂಜರಿ 2: ಕಬ್ಬು ಬೆಳೆಗೆ ಕೀಟ ಹಾಗೂ ರೋಗಗಳ ನಿಯಂತ್ರಣಕ್ಕಾಗಿ ಅತಿಯಾದ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯನ್ನು ಕಡಿಮೆ ಮಾಡಿ, ಸಾವಯವ ಹಾಗೂ ಜೈವಿಕ ಗೊಬ್ಬರಗಳ ಬಳಕೆಗೆ ರೈತರು ಆದ್ಯತೆ ನೀಡಬೇಕು ಎಂದು ಕೆಎಲ್‌ಇ ಶಿಕ್ಷಣ ಸಂಸ್ಥೆಯ ಮತ್ತಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಮಂಜುನಾಥ ಚವರಡ್ಡಿ ಸಲಹೆ ನೀಡಿದರು.
ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಶಿವಾಲಯದಲ್ಲಿ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ, ಶಿವಶಕ್ತಿ ಶುಗರ್ಸ್ ಲಿಮಿಟೆಡ್ ಹಾಗೂ ಕ್ರಯೋಜೆನ್ ಅಗ್ರಿ ಅಂಡ್ ಬಯೋಟೆಕ್ ಲಿಮಿಟೆಡ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಕಬ್ಬು ಬೆಳೆಯಲ್ಲಿ ಗೊಣ್ಣೆ ಹುಳು ನಿರ್ವಹಣೆ ಹಾಗೂ ಬರ ನಿರ್ವಹಣೆ’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.
ಹೆಚ್ಚಿನ ಇಳುವರಿ ನೀರೀಕ್ಷೆಯಲ್ಲಿ ರೈತರು ಅತಿಯಾಗಿ ರಾಸಾಯನಿಕ ಗೊಬ್ಬರ ಹಾಗೂ ನೀರಾವರಿಯನ್ನು ಬಳಸುತ್ತಿರುವುದರಿಂದ ಭೂಮಿಯ ಫಲವತ್ತತೆ ಕುಗ್ಗುತ್ತಿದೆ. ಹಿಂದೆ ನದಿ ಪಾತ್ರದ ಫಲವತ್ತಾದ ಭೂಮಿಯಲ್ಲಿ ಕಡಿಮೆ ಪ್ರಮಾಣದ ರಾಸಾಯನಿಕ ಗೊಬ್ಬರ ಬಳಸುತ್ತಿದ್ದ ಕಾರಣ ಕಬ್ಬು ಬೆಳೆಯಲ್ಲಿ ರೋಗಗಳು ಕಡಿಮೆ ಕಾಣಿಸುತ್ತಿದ್ದವು. ಆದ್ದರಿಂದ ಸಾವಯವ ಗೊಬ್ಬರ, ಜೈವಿಕ ವಿಧಾನಗಳು ಹಾಗೂ ತಜ್ಞರ ಸಲಹೆಯಂತೆ ಕೀಟ ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.
ಮನೆಯಲ್ಲೇ ತಯಾರಿಸಬಹುದಾದ ಬೇವು ಆಧಾರಿತ ದ್ರಾವಣಗಳನ್ನು ಬಳಸುವುದರಿಂದ ಕಡಿಮೆ ವೆಚ್ಚದಲ್ಲಿ ಪರಿಣಾಮಕಾರಿ ಕೀಟ ನಿಯಂತ್ರಣ ಸಾಧ್ಯವಾಗುತ್ತದೆ. ಅನಗತ್ಯವಾಗಿ ರಾಸಾಯನಿಕ ಕೀಟನಾಶಕಗಳನ್ನು ಸಿಂಪಡಿಸುವುದನ್ನು ತಪ್ಪಿಸಬೇಕು ಎಂದರು.
ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಮಾತನಾಡಿ, ಸಾವಯವ ಮತ್ತು ರಾಸಾಯನಿಕ ಗೊಬ್ಬರಗಳನ್ನು ಒಂದೇ ವೇಳೆ ಬಳಸಬಾರದು. ಅವುಗಳ ನಡುವೆ ಕನಿಷ್ಠ 15 ದಿನಗಳ ಅಂತರ ಇರಬೇಕು. ಕಬ್ಬು ಬೆಳೆಗೆ ಅಗತ್ಯಕ್ಕೆ ತಕ್ಕಷ್ಟು ನೀರಾವರಿ ನೀಡಬೇಕು. ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡರೆ ನೀರಿನ ಉಳಿತಾಯದ ಜೊತೆಗೆ ಉತ್ತಮ ಇಳುವರಿ ಪಡೆಯಬಹುದು ಎಂದು ಸಲಹೆ ನೀಡಿದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 