ಲವ್ -ರಾತ್ರಿ’- ಸಲ್ಮಾನ್ ಖಾನ್ ಗೆ ಸುಪ್ರೀಂಕೋರ್ಟ್ ಕ್ಲೀನ್ ಚಿಟ್
Salman Khan
ನವದೆಹಲಿ, ನ 29-ಹಿಂದಿ ಸಿನಿಮಾ ‘ಲವ್ ಯಾತ್ರಿ’ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಸಲ್ಮಾನ್ ಖಾನ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ಹಿಂದಿನ ವಿಚಾರಣೆಯಲ್ಲಿ ನ್ಯಾಯಮೂರ್ತಿ ದೀಪಕ್ ಗುಪ್ತ ನೇತೃತ್ವದ ನ್ಯಾಯಪೀಠ, ಸಲ್ಮಾನ್ ಖಾನ್ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ರದ್ದುಗೊಳಿಸಿತ್ತು.
2018ರಲ್ಲಿ ಬಿಡುಗಡೆಗೊಂಡ ‘ಲವ್ ರಾತ್ರಿ –ಎ ಜರ್ನಿ ಆಫ್ ಲವ್‘ ಚಿತ್ರದಲ್ಲಿ ಹಿಂದೂ ಉತ್ಸವ ನವರಾತ್ರಿ ಹಾಗೂ ಗರ್ಬಾ ನೃತ್ಯಕ್ಕೆ ಅವಮಾನ ಮಾಡಲಾಗಿದೆ ಎಂದು ಕ್ರಿಮಿನಲ್ ಮೊಕದ್ದಮೆ ದಾಖಲಾಗಿತ್ತು.
ವಿವಾದಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಕೈಬಿಡಲಾಗಿದೆ ಎಂದು ಸಲ್ಮಾನ್ ಪರ ವಕೀಲ ನಿಜಾಮ್ ಪಾಶಾ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 