ಸ್ವಾಮಿ ವಿವೇಕಾನಂದರು ವಿಶ್ವದ ಯುವಕರ ಕಣ್ಮಣಿ: ರೆಡ್ಡಿ
ಕೊಪ್ಪಳ 14: ಸ್ವಾಮಿ ವಿವೇಕಾನಂದರು ವಿಶ್ವದ ಯುವಕರ ಕಣ್ಮಣಿಯಾಗಿದ್ದರು ಎಂದು ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷ ಹೆಚ್.ವಿಶ್ವನಾಥ ರೆಡ್ಡಿ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಗಂಗಾವತಿ ತಾಲೂಕ ಪಂಚಾಯತ್, ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ, ನೆಹರು ಯುವ ಕೇಂದ್ರ ಹಾಗೂ ಗಂಗಾವತಿ ಎಸ್.ಕೆ.ಎನ್.ಜಿ. ಸಕರ್ಾರಿ ಪ್ರಥಮ ದಜರ್ೆ ಕಾಲೇಜು ಇವರ ಸಹಯೋಗದಲ್ಲಿ ದಿವ್ಯ ಚೇತನ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಹಾಗೂ ಚಿಕಾಗೋ ಭಾಷಣದ 125ನೇ ವಷರ್ಾಚರಣೆಯ ಅಂಗವಾಗಿ ಗಂಗಾವತಿಯಲ್ಲಿ ಶನಿವಾರದಂದು ಆಯೋಜಿಸಲಾದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ವಾಮಿ ವಿವೇಕಾನಂದರು ವಿಶ್ವದ ಯುವಕರ ಕಣ್ಮಣಿ ಮತ್ತು ಸಾಂಸ್ಕೃತಿಕ ಕ್ಷೇತ್ರದ ರಾಯಭಾರಿಯಾಗಿದ್ದರು. ಇಂದಿನ ಯುವ ಶಕ್ತಿಯು ನಾಳೆಯ ದಶೇದ ಶಕ್ತಿಯಾಗಿ ಹೊರಹೋಮ್ಮಲಿದ್ದು, ಎಲ್ಲಾ ಯುವಕರು ವಿವೇಕಾನಂದರ ಜೀವನ ಆದರ್ಶಗಳನ್ನು ತಮ್ಮ ಜೀವನದಲ್ಲಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷ ಹೆಚ್.ವಿಶ್ವನಾಥ ರೆಡ್ಡಿ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರವರ ಕುರಿತು ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಕೊಪ್ಪಳ ರಾಮಕೃಷ್ಣ ಆಶ್ರಮದ ಚೈತನ್ಯಾನಂದ ಸ್ವಾಮೀಜಿ ಅವರು ಮಾತನಾಡಿ, ಈಗಿನ ಯುವಕರು ದುಶ್ಚಟಗಳಿಗೆ ಬಲಿಯಾಗದೇ ಸ್ವಾಮಿ ವಿವೇಕಾನಂದರ ಜೀವನ ಶೈಲಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಮ್ಮ ಜೀವನ ಸಮೃದ್ದವಾಗುತ್ತದೆ" ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಗಂಗಾವತಿ ಎಸ್.ಕೆ.ಎನ್.ಜಿ. ಕಾಲೇಜಿನ ಪ್ರಾಚಾರ್ಯರಾದ ಡಾ.ಎನ್.ಜಿ. ಹೆಬಸೂರು ಅವರು ವಹಿಸಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿದರ್ೇಶಕ ಆರ್.ಜಿ. ನಾಡಗೀರ್, ಟಿಎಮ್ಎಇ ಶಿಕ್ಷಣ ಮಹಾವಿದ್ಯಾಲಯದ ಕೆ.ಸಿ. ಕುಲಕಣರ್ಿ, ಎಸ್.ಕೆ.ಎನ್.ಜಿ. ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಅಬ್ದುಲ್ ರಹೆಮಾನ್, ಗಂಗಾವತಿ ತಾಲೂಕು ಕ್ರೀಡಾಧಿಕಾರಿ ರಂಗಸ್ವಾಮಿ ಸೇರಿದಂತೆ ಯುವ ಸ್ಪಂದನಾ ತಂಡ, ನೆಹರೂ ಯುವ ಕೇಂದ್ರ ತಂಡ, ಕ್ರೀಡಾ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ಸಹ ಪ್ರಾಧ್ಯಾಪಕ ಚಂದ್ರಶೇಖರ ಬಿಳೇಗುಡ್ಡ ಕಾರ್ಯಕ್ರಮ ನಿರೂಪಿಸಿದರು. ರಂಗಸ್ವಾಮಿ ಕೊನೆಯಲ್ಲಿ ವಂದಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 