ಮನುಕುಲದ ಉದ್ಧಾರಕ್ಕೆ ಅವತರಿಸಿ ಬಂದವರು ಸ್ವಾಮಿ ವಿವೇಕಾನಂದರು : ಸದಾನಂದ ಡಂಗನವರ
ಹುಬ್ಬಳ್ಳಿ 13: ದೇಶದ ಯುವಕರಿಗೆ ಆತ್ಮಶಕ್ತಿ ಹಾಗೂ ಆಂತರ್ಯದ ಸತ್ವ ತುಂಬುವಲ್ಲಿ ಅಭೂತ ಪೂರ್ವ ಯಶಸ್ಸು ಸಾದಿಸಿದ ಶ್ರೇಷ್ಠ ಸಂತ, ಮಹಾತ್ಮ, ಅದ್ಭುತ ತತ್ವಜ್ಞಾನಿ ಸ್ವಾಮಿ ವಿವೇಕಾನಂದ ಅವರ ಜಯಂತಿ ಪ್ರಯುಕ್ತ ಸಿದ್ದಾರೂಢ ಸ್ವಾಮಿಜಿ ರೈಲು ನಿಲ್ದಾಣದ ಪ್ರವೇಶ ದ್ವಾರದಲ್ಲಿ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದರ ಕಂಚಿನ ಪುತ್ಥಳಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವ ನಮನ ಸಲ್ಲಿಸಿದರು. ವಾಕರಸಾ ಸಂಸ್ಥೆಯ ಮಾಜಿ ಅಧ್ಯಕ್ಷರು, ಮುಖಂಡರಾದ ಸದಾನಂದ ಡಂಗನವರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಚನ್ನಬಸಪ್ಪ ಧಾರವಾಡಶೆಟ್ಟರ, ಸಂಭಾಜಿ ಕಲಾಲ್, ಯುವಕರು, ಮುಂತಾದವರು ಇದ್ದರು. ಸದಾನಂದ ಡಂಗನವರ ಮಾತನಾಡಿ ಯುವಕರು ದೇಶದ ಆಸ್ತಿ ಆಗಬೇಕು. ಮನುಕುಲದ ಉದ್ಧಾರಕ್ಕೆ ಅವತರಿಸಿ ಬಂದವರು ಸ್ವಾಮಿ ವಿವೇಕಾನಂದರು. ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯುವಕರಿಗೆ ಸ್ಪೂರ್ತಿ, ಚೈತನ್ಯದ ಚಿಲುಮೆ ಆಗಿದ್ದಾರೆ. ಭಗವಾನ್ ಶ್ರೀ ರಾಮಕೃಷ್ಣ ಪರಮಹಂಸರ ತತ್ವಗಳನ್ನು ಜಗತ್ತಿನಾದ್ಯಂತ ಬಿತ್ತರಿಸಿದರು. ವಿಚಾರಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪಠ್ಯದಲ್ಲಿ ಅಳವಡಿಸಬೇಕು. ಸ್ವಾಮಿ ವಿವೇಕಾನಂದರ ಸಾಹಿತ್ಯ, ಬದುಕು, ಬರಹಗಳನ್ನು ಯುವಕರು ಓದಬೇಕು. ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಿದರೆ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.