ಮನರಂಜನೆ

“ತ್ರಿಬಲ್ ರೈಡಿಂಗ್” : ಚಂದನ್ ಶೆಟ್ಟಿ ಹಾಡಿಗೆ ಗೋಲ್ಡನ್ ಸ್ಟಾರ್ ಹೆಜ್ಜೆ

“ತ್ರಿಬಲ್ ರೈಡಿಂಗ್” : ಚಂದನ್ ಶೆಟ್ಟಿ ಹಾಡಿಗೆ ಗೋಲ್ಡನ್ ಸ್ಟಾರ್ ಹೆಜ್ಜೆ

ಬೆಂಗಳೂರು, ಏಪ್ರಿಲ್ 07:ಗೋಲ್ಡನ್ ಸ್ಟಾರ್ ಗಣೇಶ್ ತ್ರಿಬಲ್ ರೈಡಿಂಗ್, ಗಾಳಿಪಟ-2 ಚಿತ್ರಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರಸ್ತುತ ತ್ರಿಬಲ್ ರೈಡಿಂಗ್ ಚಿತ್ರದ ಹಾಡಿನ ಚಿತ್ರೀಕರಣ ಪ್ರಾರಂಭವಾಗಿದ್ದು, ಗಣೇಶ್ ಮೂವರು ನಾಯಕಿಯರಾದ ಕಿರುತೆರೆ ನಟಿ ಮೇಘಾ ಶೆಟ್ಟಿ, ಲವ್ ಮಾಕ್ ಟೇಲ್ ಖ್ಯಾತಿಯ ರಚನಾ ಮತ್ತು ನಟಿ ಅದಿತಿ ಪ್ರಭುದೇವ ಈ ಮೂವರು ನಾಯಕಿರ ಜೊತೆ ಹೆಜ್ಜೆ ಹಾಕುತ್ತಿದ್ದಾರೆ.ಅದ್ದೂರಿ ಸೆಟ್ ನಲ್ಲಿ ರಿಚ್ ಆಗಿ ಮೂಡಿಬರುತ್ತಿರುವ ಹಾಡಿಗೆ ಮುರಳಿ ನೃತ್ಯ ಸಂಯೋಜನೆ ಮಾಡುತ್ತಿದ್ದಾರೆ. ಸಾಯಿ ಕಾರ್ತಿಕ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ವಿಭಿನ್ನ ಹಾಡಿಗೆ ಚಂದನ್ ಶೆಟ್ಟಿ ಸಾಹಿತ್ಯ ರಚಿಸಿ ಧ್ವನಿ ನೀಡಿದ್ದಾರೆ. ಈಗಾಗಲೇ ಮಾತಿನ ಭಾಗ ಮುಗಿಸಿರುವ ಸಿನಿಮಾತಂಡ ಸದ್ಯ ಹಾಡಿನ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಲಿದೆ.  ಕೊರೋನಾ ಹೆಚ್ಚಾಗುತ್ತಿರುವ ಕಾರಣ ಸಿನಿಮಾ ಬಿಡುಗಡೆ  ತಡವಾಗುವ ಸಾಧ್ಯತೆ ಇದೆ. ರಾಮಗೋಪಾಲ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರದಲ್ ದೊಡ್ಡ ತಾರಾಬಳಗದಲ್ಲಿ ಸಾಧುಕೋಕಿಲ, ರಂಗಾಯಣ ರಘು, ರವಿಶಂಕರ್ ಗೌಡ, ಕುರಿ ಪ್ರತಾಪ್, ಡಿಂಗ್ರಿ ನಾಗರಾಜ್ ಸೇರಿದಂತೆ ಹಲವು ಜನಪ್ರಿಯ ಕಲಾವಿದರಿದ್ದಾರೆ. 


ಸುದ್ದಿ ಓದಿ