ಅರ್ಥಪೂರ್ಣ ಆಚರಣೆಗೆ ಅಗತ್ಯ ಕ್ರಮಕೈಗೊಳ್ಳಿ: ಎಡಿಸಿ ಎನ್.ಮಹೇಶ್ ಬಾಬು
ಹೊಸಪೇಟೆ (ವಿಜಯನಗರ) 19: ಅಮೃತ ಭಾರತಿಗೆ ಕನ್ನಡದ ಆರತಿ ಶಿಷರ್ಿಕೆ ಅಡಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು 4 ಹಂತಗಳಲ್ಲಿ ಏರ್ಪಡಿಸಲಾಗುತ್ತಿದ್ದು, ಈ ಅಮೃತ ಮಹೋತ್ಸವ ನಿಮಿತ್ತ ವಿಜಯನಗರ ಜಿಲ್ಲೆಯಲ್ಲಿ ಏರ್ಪಡಿಸುವ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಮತ್ತು ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎನ್.ಮಹೇಶ್ ಬಾಬು ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ನಿಮಿತ್ತ ಏರ್ಪಡಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಟ್ಟು 4 ಹಂತಗಳಲ್ಲಿ ಅಮೃತ ಮಹೋತ್ಸವ ಆಚರಿಸಲಾಗುತ್ತಿದ್ದು, ಮೊದಲ ಹಂತವಾಗಿ ಇದೇ ಮೇ 28ರಂದು ಸ್ವಾತಂತ್ರ್ಯ ಹೋರಾಟದ 75 ಸ್ಥಳಗಳಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ಆಚರಣೆ ಮಾಡಲಾಗುತ್ತಿದೆ ಮತ್ತು ಅಮೃತ ಮಹೋತ್ಸವದ ಸವಿನೆನಪಿಗಾಗಿ 75 ಶಿಲಾಫಲಕಗಳ ಅಳವಡಿಸಲಾಗುತ್ತಿದ್ದು, ಅದರಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆ, ಕೂಡ್ಲಿಗಿ ಹಾಗೂ ಕೊಟ್ಟೂರು ಈ ಸ್ಥಳಗಳು ಸೇರಿವೆ ಎಂದರು.
2ನೇ ಹಂತದಲ್ಲಿ ಆಯ್ದ 15 ಸ್ಥಳಗಳಲ್ಲಿ ಹೋರಾಟದ ನೆಲದಲ್ಲಿ ಒಂದು ದಿನದ ಕಾರ್ಯಕ್ರಮ, 4 ಕಂದಾಯ ವಿಭಾಗಗಳಿಂದ 06 ಸ್ವಾತಂತ್ರ್ಯ ಅಮೃತ ಮಹೋತ್ಸವದ ರಥಯಾತ್ರೆ ಜರುಗಲಿದ್ದು, ನಂತರ ಬೆಂಗಳೂರಿನಲ್ಲಿ ಸಮಾರೋಪ ಜರುಗಲಿದೆ ಎಂದರು.
ರಾಷ್ಟ್ರದ ಸ್ವಾತಂತ್ರ್ಯ ಸಂಗ್ರಾಮದ ನೆನಪುಗಳನ್ನು ಮೆಲಕು ಹಾಕುತ್ತಾ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೀವನವನ್ನೇ ತ್ಯಾಗ ಮಾಡಿದ ಹೋರಾಟಗಾರರ ಜೀವನಗಾಥೆ, ಹೋರಾಟದ ವಿವಿಧ ಹಂತಗಳನ್ನು ವಿಶೇಷವಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಕನರ್ಾಟಕದ ಕೊಡುಗೆಯನ್ನು ಯುವಜನಾಂಗಕ್ಕೆ ಹಗೂ ಸಾರ್ವಜನಿಕರಿಗೆ ತಿಳಿಪಡಿಸುವ ಉದ್ದೇಶದಿಂದ ರಾಜ್ಯ ಸರಕಾರ ವಿಭಿನ್ನವಾದ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಅದನ್ನು ಯಶಸ್ವಿಗೊಳಿಸಬೇಕು ಎಂದರು.
ವೀರಸಾವರ್ಕರ್ ಜನ್ಮದಿನಾಚರಣೆ ಅಂಗವಾಗಿ ಮೊದಲ ಹಂತದ ಕಾರ್ಯಕ್ರಮವನ್ನು ಮೇ 28ರಂದು ರಾಜ್ಯದ 75 ಸ್ಥಳಗಳಲ್ಲಿ ಏರ್ಪಡಿಸಲಾಗುತ್ತಿದ್ದು, ಅದರಂತೆ ಹೊಸಪೇಟೆ, ಕೂಡ್ಲಿಗಿ ಹಾಗೂ ಕೊಟ್ಟುರು ನಗರಗಳಲ್ಲಿಯೂ ಆಯೋಜಿಸಲಾಗುತ್ತಿದೆ ಎಂದು ವಿವರಿಸಿದ ಅಪರ ಜಿಲ್ಲಾಧಿಕಾರಿ ಎನ್.ಮಹೇಶ್ ಬಾಬು ಅವರು ಮೇ.28ರಂದು ಸಂಜೆ 4ಕ್ಕೆ ನಗರದ ವಡಕರಾಯ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಲಿದ್ದು, ಸಂಜೆ 5:30ಕ್ಕೆ ನಗರದ ಪಂಪ ಕಲಾರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅಣ್ಣಸಾಹೇಬ ಅವರು ಚಾಲನೆ ನೀಡಲಿದ್ದಾರೆ. ಅದೇ ರೀತಿ ಕೂಡ್ಲಿಗಿ ಮತ್ತು ಕೊಟ್ಟೂರಿನಲ್ಲಿಯೂ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಈ ವೇದಿಕೆ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯಕ್ಕಿಂತ ಪೂರ್ವ ಇದ್ದ ಭಾರತ, ಸ್ವಾತಂತ್ರ್ಯ ಹೋರಾಟದ ಮೈಲುಗಲ್ಲುಗಳು, ಸ್ವಾತಂತ್ರ್ಯ ಭಾರತ ಎದುರಿಸಿದ ಸವಾಲುಗಳು, ವಿಶ್ವಗುರುವಾಗಿ ಬೆಳೆಯುತ್ತಿರುವ ಭಾರತ, ಮೆಕ್ ಇನ್ ಇಂಡಿಯಾ ಆಗಿ ಬೆಳೆಯುತ್ತಿರುವ ಭಾರತ, ಸ್ಥಳೀಯ ಸ್ವಾತಂತ್ರ್ಯ ಹೋರಾಟದ ಚಿತ್ರಣ ಸೇರಿದಂತೆ ವಿವಿಧ ಸ್ವಾತಂತ್ರ್ಯ ಹೋರಾಟದ ಸಂಬಂಧಿತ ವಿಷಯಗಳ ಕುರಿತು ವಿಶೇಷ ಉಪನ್ಯಾಸ ನೀಡಲಾಗುತ್ತದೆ. ದೇಶಭಕ್ತಿಗೀತೆಗಳ ಗಾಯನ, ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ತೊಗಲುಗೊಂಬೆ ನಾಟಕ ಪ್ರದರ್ಶನ ಮತ್ತು ಸ್ವಾತಂತ್ರ್ಯ ಹೋರಾಟ ಕುರಿತ ವಿಶೇಷ ನಾಟಕ ಪ್ರದಶರ್ಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಸಮಿತಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಗ್ರಾಪಂಗಳಿಂದ ಕನಿಷ್ಠ 50 ಜನರು ಕರೆತರುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಸ್ವ-ಸಹಾಯ ಗುಂಪುಗಳು, ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಸಂಘಟನೆಗಳನ್ನು ಇದರಲ್ಲಿ ಭಾಗಿಯಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಎನ್.ಮಹೇಶ್ ಬಾಬು ಅವರು ಜಿಲ್ಲೆಯಲ್ಲಿ ನಡೆಯುವ ಈ ಕಾರ್ಯಕ್ರಮ ವ್ಯಾಪಕ ಪ್ರಚಾರ ಒದಗಿಸಬೇಕು ಎಂದರು.
ಸ್ವಾತಂತ್ರ್ಯ ಹೋರಾಟಗಾರರಿದ್ದಲ್ಲಿ ಕರೆದು ಸನ್ಮಾನಿಸಿ ಮತ್ತು ದೇಶರಕ್ಷಣೆಯಲ್ಲಿ ಪ್ರಾಣತೆತ್ತ ಕುಟುಂಬದವರನ್ನು ಕರೆಸಿ ಸನ್ಮಾನಿಸಬೇಕು. ಪರಮವೀರಚಕ್ರ ಹಾಗೂ ಇತರೇ ಸೇನಾ ಪ್ರಶಸ್ತಿಗಳನ್ನು ಪಡೆದ ವ್ಯಕ್ತಿಗಳು ಜಿಲ್ಲೆಯಲ್ಲಿದ್ದಲ್ಲಿ ಕರೆಸಿ ಸನ್ಮಾನಿಸಬೇಕು ಎಂದು ತಿಳಿಸಿದ ಎಡಿಸಿ ಮಹೇಶ್ ಬಾಬು ಅವರು ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಶಾಲಾ-ಕಾಲೇಜು ವಿದ್ಯಾಥರ್ಿಗಳಿಗೆ ವಿವಿಧ ಸ್ಪಧರ್ೆಗಳನ್ನು ಆಯೋಜಿಸಬೇಕು ಮತ್ತು ಅವರು ಪಾಲ್ಗೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಸಹಾಯಕ ಆಯುಕ್ತ ಸಿದ್ಧರಾಮೇಶ್ವರ ಅವರು ಅನೇಕ ಸಲಹೆ-ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಸಿದ್ದಲಿಂಗೇಶ ರಂಗಣ್ಣನವರ್ ಅವರು ಕಾರ್ಯಕ್ರಮದ ಉದ್ದೇಶ ವಿವರಿಸಿದರು.ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು