ತಾಲೂಕಾ ಮಟ್ಟದ ಪ್ರಬಂಧ ಸ್ಪರ್ಧೆ :ಶಿಕ್ಷಕ ಬಂಡೆಗೆ ದ್ವಿತೀಯ ಸ್ಥಾನ
ಇಂಡಿ: ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜಯಪುರ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ವತಿಯಿಂದ ಪಟ್ಟಣದ ಹಡಪದ ಅಪ್ಪಣ್ಣ ಶಾಲೆಯಲ್ಲಿ ಹಮ್ಮಿಕೊಂಡ "2022-23 ನೇ ಸಾಲಿನ ತಾಲೂಕಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ "ಯ ಪ್ರಬಂಧ ಸ್ಪರ್ಧಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ ಶಿಕ್ಷಕ ಸಂತೋಷ ಬಂಡೆ ಅವರಿಗೆ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಎಸ್ ಆರ್ ನಡಗಡ್ಡಿ ಅವರು ಪ್ರಶಸ್ತಿ ಪತ್ರ ನೀಡಿದರು