ತಾಲೂಕು ಪಂಚಾಯಿತಿ ಇಒ ಹೆಚ್ಚುವರಿ ಪ್ರಭಾರದಿಂದ ಎಚ್.ಎಸ್. ಜಿನಗಿ ಬಿಡುಗಡೆ
Taluka Panchayat EO with additional charge of H.S. Jinagi released
ಗದಗ, 28: ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿದ್ದ ಎಚ್.ಎಸ್. ಜಿನಗಿ ಅವರನ್ನು ಆ ಜವಾಬ್ದಾರಿಯಿಂದ ಬಿಡುಗಡೆಗೊಳಿಸಿ, ಅವರ ಮಾತೃ ಇಲಾಖೆಯಾದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಹಿಂಪಡೆಯುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಬೆಂಗಳೂರು ಇವರಿಗೆ ಆದೇಶಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗದಗ ಜಿಲ್ಲಾ ಕಾರ್ಯಾಧ್ಯಕ್ಷ ರವಿ ವಗ್ಗನವರ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಚ್.ಎಸ್. ಜಿನಗಿ ಅವರು ಪಶುವೈದ್ಯಕೀಯ ಪರೀವೀಕ್ಷಕರು/ಅಧಿಕಾರಿಯಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಗದಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ತಾಲೂಕು ಪಂಚಾಯಿತಿ ಇಒ ಹುದ್ದೆಗೆ ಹೆಚ್ಚುವರಿ ಪ್ರಭಾರದಲ್ಲಿ ನೇಮಕಗೊಂಡಿದ್ದರು. ಆದರೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ಇಲಾಖಾ ನಿಯಮಗಳ ಪ್ರಕಾರ ಅವರನ್ನು ತಾಲೂಕು ಪಂಚಾಯಿತಿ ಪ್ರಭಾರ ಜವಾಬ್ದಾರಿಯಿಂದ ಮುಕ್ತಗೊಳಿಸಿ ಮೂಲ ಇಲಾಖೆಗೆ ಹಿಂಪಡೆಯುವಂತೆ ಆದೇಶಿಸಲಾಗಿದೆ ಎಂದು ಹೇಳಿದರು. ಈ ಕುರಿತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರದ ಮೂಲಕ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ಅವರು ಆರೋಪಿಸಿದರು.
ಜುಲೈ 23ರಂದು ಮಧ್ಯಾಹ್ನ 2.20ರ ಸುಮಾರಿಗೆ ಗದಗ ನಗರದ ಪಾಲಿ ಕ್ಲಿನಿಕ್ ಪಶು ವೈದ್ಯಕೀಯ ಇಲಾಖೆಗೆ ತೆರಳಿ, ಅಲ್ಲಿನ ಪಾಲಿ ಕ್ಲಿನಿಕ್ ಕೊಠಡಿ ಸಂಖ್ಯೆ 15ರಲ್ಲಿ ಉಪನಿರ್ದೇಶಕರನ್ನು ಭೇಟಿಯಾಗಲು ತೆರಳಿದ್ದೆ. ಆದರೆ ಅವರು ಅಂದು ಹಾಜರಿರದ ಕಾರಣ ಭೇಟಿ ಸಾಧ್ಯವಾಗಲಿಲ್ಲ ಎಂದು ರವಿ ವಗ್ಗನವರ ತಿಳಿಸಿದರು. ಅದೇ ಸಂದರ್ಭದಲ್ಲಿ ಅಲ್ಲಿದ್ದ ಪಶುವೈದ್ಯಾಧಿಕಾರಿ ಡಾ. ಹೀರಾಲಾಲ್ ಎಸ್. ಜಿನಗಿ ಅವರು ತಮ್ಮ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅವರು ಆರೋಪಿಸಿದರು. ನನ್ನ ವಿರುದ್ಧ ಸರ್ಕಾರದಿಂದ ಆದೇಶ ಮಾಡಿಸಿಕೊಂಡು ಬರುತ್ತಿದ್ದೀಯಾ ಎಂದು ಹೇಳಿ ನಿಂದಿಸಿದರು. ಅಲ್ಲದೆ ಕಚೇರಿ ಕೊಠಡಿಯಲ್ಲಿದ್ದ ಕುರ್ಚಿಗಳನ್ನು ಎತ್ತಿ ಎಸೆಯಲು ಮುಂದಾಗಿ ಜೀವಕ್ಕೆ ಹಾನಿ ಮಾಡುವ ರೀತಿಯಲ್ಲಿ ವರ್ತಿಸಿದರು ಎಂದು ಆರೋಪಿಸಿದರು.
ಈ ವೇಳೆ ಅಲ್ಲಿದ್ದ ಡಾ. ಆರ್.ವೈ. ಗುರಿಕಾರ, ಡಾ. ಸತೀಶ್ ಕಟ್ಟಿಮನಿ, ಡಾ. ಪ್ರಕಾಶ ಜಟ್ಟಣ್ಣವರ ಹಾಗೂ ಇಲಾಖೆಯ ಸಿಬ್ಬಂದಿ ಕಲ್ಮೇಶ್ ಹಿರೇಮಠ ಅವರು ಮಧ್ಯಪ್ರವೇಶಿಸಿ ತಮ್ಮನ್ನು ರಕ್ಷಿಸಿ ಹೊರಗೆ ಕರೆದುಕೊಂಡು ಬಂದರು ಎಂದು ಹೇಳಿದರು. ಘಟನೆ ಕುರಿತು ಉಪನಿರ್ದೇಶಕರು ಹಾಗೂ ಪಶು ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ತಮ್ಮ ಜೀವಕ್ಕೆ ಬೆದರಿಕೆ ಇದ್ದು, ಘಟನೆಯ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವುದಾಗಿ ರವಿ ವಗ್ಗನವರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಉಪಾಧ್ಯಕ್ಷ ಗೀರೀಶ ಹೊಸಮನಿ, ತಾಲೂಕು ಪ್ರಧಾನ ಕಾರ್ಯದರ್ಶಿ ಶಂಕರಗೌಡ ಪಾಟೀಲ್, ಜಿಲ್ಲಾ ಕಾರ್ಯದರ್ಶಿ ಈಶ್ವರ ಗದಗಿನ, ತಾಲೂಕು ಕಾರ್ಯದರ್ಶಿ ರೇವಣಸಿದ್ದಪ್ಪ ಬೀಡನಾಳ, ತಾಲೂಕು ಸಂಚಾಲಕ ಶರಣಪ್ಪ ಕಮ್ಮಾರ, ತಾಲೂಕು ಕಾರ್ಯಾಧ್ಯಕ್ಷ ಗೂಳಪ್ಪ ಗುಡದೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ 