ಹೂವಿನ ಹಡಗಲಿ ಶಿಕ್ಷಕರ ದಿನಾಚರಣೆಭವ್ಯ ಮೆರವಣಿಗೆ
ಹೂವಿನ ಹಡಗಲಿ: ಪ್ರಸಕ್ತ ಸಾಲಿನ ಶಿಕ್ಷಕರ ದಿನಾಚರಣೆ ಅಂಗವಾಗಿ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆ ವೈಭವವಾಗಿ ನಡೆಯಿತು.ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ ಪಿ ಎಂ ಅಶೋಕ್ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ ಬಿ ಜಗದೀಶ್ ಪ್ರೌಢಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಪಿ ಪ್ರಕಾಶ್ ಉಪನ್ಯಾಸಕರ ಸಂಘದ ಅಧ್ಯಕ್ಷ ಬಸೆಟ್ಟಿ ಪ್ರಕಾಶ್ ಇತರರು ಭಾವಚಿತ್ರಕ್ಕೆ ಪುಷ್ಪ ಸಿಂಚನ ಗೈದರು. ಪಟ್ಟಣದ ಪ್ರಾಚೀನ ಐತಿಹಾಸಿಕಕಲ್ಲೇಶ್ವರ ದೇವಸ್ಥಾನದಿಂದ ಮೆರವಣಿಗೆ ಹೊರಟು ಮುಖ್ಯ ಬೀದಿ, ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಮೂಲಕ ರುದ್ರಾಂಬ ಎಂ ಪಿ ಪ್ರಕಾಶ್ ಸರ್ಕಾರಿ ಪದವಿ ಕಾಲೇಜು ತಲುಪಿತು.ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಅಧಿಕಾರಿಗಳು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಕರು ಭಾಗವಹಿಸಿದ್ದರು.