ರಾಷ್ಟ್ರೀಯ ಜ್ಞಾನಸಿರಿ ಪ್ರಶಸ್ತಿಗೆ ಶಿಕ್ಷಕ ಸಂತೋಷ ಬಂಡೆ ಆಯ್ಕೆ
Teacher Santhosh Bande selected for National Gyansiri Award
ಇಂಡಿ 24: ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಸ್ ಹಾಗೂ ಕರ್ನಾಟಕ ನಾಡ ರಕ್ಷಣಾ ವೇದಿಕೆ ವಿಜಯಪುರ ವತಿಯಿಂದ ವಿಶೇಷ ಸಾಧಕರಿಗೆ ಕೊಡಮಾಡುವ ರಾಷ್ಟ್ರೀಯ ಜ್ಞಾನಸಿರಿ ಪ್ರಶಸ್ತಿಗೆ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಬಂಡೆ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸುರೇಶ ಜತ್ತಿ ತಿಳಿಸಿದ್ದಾರೆ. ಇದೇ 28 ರ ಇಳಿಹೊತ್ತು 4.30 ಕ್ಕೆ ವಿಜಯಪುರ ನಗರದಲ್ಲಿ ಜರುಗುವ ’ಜ್ಞಾನಸಿರಿ ಉತ್ಸವ-2026’ ಸಮಾರಂಭದಲ್ಲಿ ಮನುಗೂಳಿಯ ಸಂಗನಬಸವ ಶಿವಾಚಾರ್ಯರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಸೇರಿದಂತೆ ಅನೇಕ ಗಣ್ಯರು ಶಿಕ್ಷಕ ಸಂತೋಷ ಬಂಡೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 