ಜನರ ಸಮಸ್ಯೆಗಳಿಗೆ ಸ್ಪಂದಿಸುವೆ ತಹಶೀಲ್ದಾರ್ ಹೆಚ್ ವಿಶ್ವನಾಥ
ಸಿರುಗುಪ್ಪ-ಸಾರ್ವಜನಿಕರ ಯಾವುದೇ ಸಮಸ್ಯೆಗಳು ಇದ್ದರೂ ಪರಿಹರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿ ತಹಶೀಲ್ದಾರ್ ಹೆಚ್ ವಿಶ್ವನಾಥ ಅವರು ಹೇಳಿದರು.
ತಾಲೂಕ ಕಚೇರಿಯಲ್ಲಿ ಮಾತನಾಡಿದ ಅವರು ರೈತರು ಮತ್ತು ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೆ ನೇರ ಬಂದು ಹೇಳಿಕೊಳ್ಳಬಹುದು ಅಥವಾ ದೂರು ನೀಡಬಹುದು ಸಿರುಗುಪ್ಪ ತಾಲೂಕಿನಲ್ಲಿ ಕುಡಿಯುವ ನೀರಿನ ಕೆರೆಗಳು ಖಾಲಿಯಾಗಿವೆ ಕೆರೆಗಳಿಗೆ ನೀರು ಭರ್ತಿ ಮಾಡುವ ಬಗ್ಗೆ ಅಧಿಕಾರಿಗಳ ಸಭೆ ನಡೆಸಲಾಗುವುದು ಎಲ್ ಎಸ್ ಸಿ ಕಾಲುವೆಯಲ್ಲಿ ನೀರು ಬಿಡುಗಡೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಆರಂಭವಾಗಿವೆ ರೈತರಿಗೆ ಬೀಜ ರಸಗೊಬ್ಬರದ ಕೊರತೆಯಾಗದಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಕುಡಿಯುವ ನೀರಿಗಾಗಿ ನಿರ್ಮಿಸಿರುವ ಶುದ್ಧ ನೀರಿನ ಘಟಕಗಳು ಸಮರ್ಪಕ ನಿರ್ವಹಣೆ ಇಲ್ಲದೆ ಕೆಲವೆಡೆ ಸ್ಥಗಿತಗೊಂಡಿವೆ ಎಂಬ ದೂರುಗಳಿವೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಘಟಕಗಳ ದುರಸ್ತಿ ಸಮರ್ಪಕ ನಿರ್ವಹಣೆಗೆ ಸೂಚಿಸಲಾಗುವುದು ತೆಕ್ಕಲಕೋಟೆ ಪಟ್ಟಣದ ಕುಡಿಯುವ ನೀರಿನ ಕೆರೆ ಖಾಲಿಯಾಗಿದ್ದು ಶೀಘ್ರ ದುರಸ್ತಿ ಮಾಡಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಅವರು ತಿಳಿಸಿದರು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ಮತ್ತಿತರರು ಉಪಸ್ಥಿತರಿದ್ದರು.