ಐವರು ಕುಖ್ಯಾತ ಕಳ್ಳರ ಬಂಧನ
ಲೋಕದರ್ಶನ ವರದಿ
ಹಾವೇರಿ14: ಚೈನ್ ಹಾಗೂ ಬೆಲೆ ಆಳುವ ವಸ್ತುಗಳನ್ನು ಕದಿಯುತ್ತಿದ್ದ ಐದು ಕುಖ್ಯಾತ ಕಳ್ಳರನ್ನು ಆಡೂರ ಪೊಲೀಸ್ ಠಾಣಾ ಸಿಬ್ಬಂದಿಗಳು ಬಂಧಿಸಿದ್ದಾರೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜೆ.ಜಗದೀಶ್ ತಿಳಿಸಿದರು.
ನಗರದ ಎಸ್ಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜಾ ಹುಸೇನ್ಸಾಬ್ ಬೋಸ್ಲೆ, ಸುರೇಶ ಕೃಷ್ಣಪ್ಪ ಪವಾರ, ಸಂತೋಷ ಕೃಷ್ಣಪ್ಪ ಪವಾರ, ವೀರಭದ್ರಯ್ಯ ನಿಂಗಯ್ಯ ಪ್ಯಾಟಿಮಠ, ತಿಮ್ಮಪ್ಪ ನಾಗಪ್ಪ ವಡ್ಡರ ಎಂಬ ಕಳ್ಳರನ್ನು ಬಂಧಿಸಲಾಗಿದೆ.
ಬಂಧಿತರಿಂದ 370 ಗ್ರಾಂ ಚಿನ್ನಾಭರಣ, 700 ಗ್ರಾಂ ಬೆಳ್ಳಿ ಆಭರಣ ಮೊಬೈಲ್ ಪೋನ್ ಸೇರಿದಂತೆ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತ ಆರೋಪಿಗಳು. ಜಿಲ್ಲೆಯ ಹಾನಗಲ್, ಆಡೂರ ಮತ್ತು ಶಿಗ್ಗಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು.
ಶಿಗ್ಗಾವಿ ವೃತ್ತ ಸಿಪಿಐ ಆರ್.ಎಫ್.ದೇಸಾಯಿ ಹಾಗೂ ಹಾನಗಲ್ ವೃತ್ತ ಸಿಪಿಐ ಪ್ರವೀಣ ನೀಲಮ್ಮನವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು ಎಂದು ತಿಳಿಸಿದರು ಅವರು ತಿಳಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 