ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ
ಜಮ್ಮು, ಮೇ 2 ಪಾಕಿಸ್ತಾನ ಸೇನೆ ಗುರುವಾರ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ಪೂಂಚ್ನ ಗಡಿ ನಿಯಂತ್ರಣಾ ರೇಖೆ ಬಳಿಯ ಹಳ್ಳಿಗಳತ್ತ ಶೆಲ್ ದಾಳಿ ನಡೆಸಿದೆ.
ಪಾಕಿಸ್ತಾನದ ಸೇನೆ ಇಂದು ಬೆಳಿಗ್ಗೆ ಕದನ ವಿರಾಮ ಉಲ್ಲಂಘಿಸಿದ್ದು, ಪೂಂಚ್ನ ಶಹಪುರ್ ವಲಯಗಳಲ್ಲಿ ದಾಳಿ ನಡೆಸಿದೆ ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ.
ಪಾಕಿಸ್ತಾನ, ಗಡಿ ನಿಯಂತ್ರಣಾ ರೇಖೆಯಲ್ಲಿ ಸಣ್ಣ ಶಸ್ತ್ರಾಸ್ತ್ರಗಳೊಂದಿಗೆ ಅಪ್ರಚೋದಿತ ದಾಳಿ ಆರಂಭಿಸಿ, ಬಳಿಕ ಶೆಲ್ ದಾಳಿ ನಡೆಸಿದೆ. ಭಾರತೀಯ ಸೇನೆ ಕೂಡ ಪ್ರತ್ಯುತ್ತರ ನೀಡಿದೆ. ಈವರೆಗೆ ಯಾವುದೇ ಹಾನಿ ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಆದಾಗ್ಯೂ, ಈ ಪ್ರದೇಶದ ಎಲ್ಲ ಶಾಲೆಗಳಿಗೆ ಗುರುವಾರ ರಜೆ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 