ಹೂವಿನ ಹಡಗಲಿ

ಸಂಭ್ರಮದ ಶ್ರೀ ಗವಿಸಿದ್ದೇಶ್ವರ ರಥೋತ್ಸವ

ಸಂಭ್ರಮದ  ಶ್ರೀ ಗವಿಸಿದ್ದೇಶ್ವರ ರಥೋತ್ಸವ

ಹೂವಿನಹಡಗಲಿ 7:  ಪಟ್ಟಣದ ಶ್ರೀ ಗವಿಸಿದ್ದೇಶ್ವರ ರಥೋತ್ಸವ ಸಂಭ್ರಮ, ಸಡಗರದಿಂದ ಶುಕ್ರವಾರ  ಸಾಯಂಕಾಲ ನಡೆಯಿತು.ಸ್ವಾಮಿಯ ಉತ್ಸವ ಮೂರ್ತಿಯನ್ನು ಶ್ರೀಮಠದಿಂದ ಭವ್ಯ ಮೆರವಣಿಗೆ ಮೂಲಕ ತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸಂಪ್ರದಾಯದಂತೆ ಫಲಪುಷ್ಪಗಳಿಂದ ಸರ್ವಾಲಂಕೃತಗೊಂಡಿದ್ದ ರಥಕ್ಕೆ ಪೂಜೆ, ಮಹಾ ಮಂಗಳಾರತಿ ಸಲ್ಲಿಸಿದ ನಂತರ ಗವಿಸಿದ್ದೇಶ್ವ ಸ್ವಾಮಿಯ ಜಯಘೋಷ, ಹರ್ಷೋದ್ಗಾರಗಳೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ನಾನಾ ವಾದ್ಯಗಳು, ಸಹಸ್ರಾರು ಭಕ್ತರ ನಡುವೆ ವಿಜೃಂಭಣೆಯ ರಥೋತ್ಸವಕ್ಕೆ ಮೆರುಗು ತಂದಿದ್ದವು. ಗವಿಮಠದ ಡಾ.ಹಿರಿಶಾಂತವೀರ ಸ್ವಾಮಿ ಸೇರಿದಂತೆ ಹರ ಗುರು ಚರ ಮೂರ್ತಿಗಳು ಭಾಗವಹಿಸಿದ್ದರು. 


ಸುದ್ದಿ ಓದಿ