ಮಕ್ಕಳ ಹಕ್ಕು ರಕ್ಷಣೆ ಮಾಡುವಲ್ಲಿ ಸಹಾಯವಾಣಿ ಸದಾ ಸಿದ್ದ: ಶಿವರಾಜ
ಲೋಕದರ್ಶನವರದಿ
ಹಾವೇರಿ: ಪ್ರೀತಿ, ಬಾಲ್ಯ ಮತ್ತು ಶಿಕ್ಷಣ ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕುಗಳಾಗಿವೆ, ಮಕ್ಕಳು ಸಮುದಾಯದಲ್ಲಿ ಬೆಳೆದು ದೇಶವನ್ನು ಮುನ್ನಡೆಸುವವರಾಗಬೇಕು, ಇಂತಹ ಸಮಸ್ಯೆ ಪೀಡಿತ ಮಕ್ಕಳನ್ನು ಸಮಸ್ಯೆಯಿಂದ ಹೊರತರುವಲ್ಲಿ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವಲ್ಲಿ ಮಕ್ಕಳ ಸಹಾಯವಾಣಿಯು ಸದಾ ಸಿದ್ದವಾಗಿರುತ್ತದೆ ಎಂದು ಮಕ್ಕಳ ಸಹಾಯವಾಣಿ ಕೇಂದ್ರದ ಜಿಲ್ಲಾ ಸಂಯೋಜಕರಾದ ಶಿವರಾಜ.ವಿ ರವರು ಹೇಳಿದರು.
ಮಕ್ಕಳ ಸಹಾಯವಾಣಿ ಕೇಂದ್ರ ಹಾವೇರಿ ಮತ್ತು ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ(ರಿ) ಹಾವೇರಿ ಇವರ ಸಂಯುಕ್ತಾಶ್ರಯದಲ್ಲಿ ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ "ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ (1098) ದಿನಾಚರಣೆ" ಯನ್ನು ಉದ್ಘಾಟಿಸಿ ಮಾತನಾಡುತ್ತಾ ಪ್ರತೀ ವರ್ಷ ಮೇ-17 ರಂದು ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನವನ್ನಾಗಿ ಆಚರಿಸುವಂತೆ ಈ ವರ್ಷವೂ ಸಹ "ಕನೆಕ್ಟಿಂಗ್ ವಿತ್ ಚಿಲ್ಡ್ರನ್ ಎಂಬ ಧ್ಯೇಯದೊಂದಿಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಕೀಲರಾಗದ ಜಿ.ಎ.ಹೀರೆಮಠ ರವರು ಮಾತನಾಡುತ್ತಾ ನಮ್ಮ ಜಿಲ್ಲೆಯಲ್ಲಿ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗಿತ್ತಿವೆ.
ಇಂತಹ ದೌರ್ಜನ್ಯಗಳಿಂದ ಮಕ್ಕಳನ್ನು ರಕ್ಷಿಸಬೇಕಾದರೆ ಪ್ರತಿಯೊಬ್ಬ ನಾಗರೀಕನು ಎಲ್ಲಾ ಮಕ್ಕಳನ್ನು ತನ್ನ ಮಕ್ಕಳಂತೆ ಭಾವಿಸಬೇಕು ಹಾಗೂ ಪ್ರತೀ ಮನೆಗಳಲ್ಲಿ ಪಾಲಕರು ಮಕ್ಕಳ ಬಗ್ಗೆ ಕಾಳಜಿಯನ್ನು ವಹಿಸಿ ಅವರ ದಿನಚರಿಯ ಬಗ್ಗೆ ವಿಚಾರಿಸುವುದು ಪ್ರತಿಯೊಬ್ಬರ ಪಾಲಕರ ಕರ್ತವ್ಯವಾಗಿದೆ.
ಇಂತಹ ಸಮಸ್ಯೆಗಳು/ದೌರ್ಜನ್ಯಗಳಿಗೆ ಒಳಗಾದಂತಹ ಮಕ್ಕಳ ರಕ್ಷಣೆ ಮಾಡುವಲ್ಲಿಲ್ಲಿ ಚೈಲ್ಡ್ ಲೈನ್-1098 ಹಾವೇರಿ ತಂಡವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಗುಡುದಯ್ಯ.ಬಿ.ಬರಡಿ, ಗಂಗವ್ವ.ಎಸ್.ಸಾಂಗ್ಲಿ, ರೇಣುಕಾ, ಸ್ವ-ಸಹಾಯ ಸಂಘದ ಅಧ್ಯಕ್ಷರಾದ ಗಂಗಮ್ಮ ಹಾಗೂ ಮಕ್ಕಳ ಸಹಾಯವಾಣಿ ಕವಿತಾ ಕೋರಿ. ಶಾಂತಾ ಚಿಟ್ಟಿ ಮತ್ತು ಮಾರುತಿ ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 