ಸವದತ್ತಿಯಲ್ಲಿ ಮನೆಗಳಿಗೆ ನುಗ್ಗಿದ ನೀರು ಜೆಸಿಬಿ ಮೂಲಕ ಚರಂಡಿ ಸ್ವಚ್ಛಗೊಳಿಸಿದ ನಗರಸಭೆ
The municipal council used a JCB to clean the drains after water entered houses in Savadatti
ಸವದತ್ತಿ, 09 : ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ತಾಲೂಕಿನ ರಾಮಾಪೂರಸೈಟ್ ಮನೆಗಳಿಗೆ ನೀರು ನುಗ್ಗಿ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಯಿತು. ಚರಂಡಿಗಳಲ್ಲಿ ತುಂಬಿದ್ದ ಹೂಳು ಮತ್ತು ಗಿಡಗಂಟಿಗಳಿಂದ ನೀರು ಸರಾಗವಾಗಿ ಹರಿಯದ ಕಾರಣ, ರಸ್ತೆ ಮತ್ತು ಮನೆಗಳ ಅಂಗಳಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ತಾಲೂಕು ಆಡಳಿತ, ತಕ್ಷಣವೇ ಕಾರ್ಯಾಚರಣೆಗೆ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಮತ್ತು ನಗರಸಭೆ ಪೌರಾಯುಕ್ತ ಸಂಗನಬಸಯ್ಯ ಗದಗಿನಮಠ ಅವರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ತಕ್ಷಣವೇ ಜೆಸಿಬಿ ಯಂತ್ರಗಳ ಸಹಾಯದಿಂದ ಚರಂಡಿಗಳಲ್ಲಿ ತುಂಬಿದ್ದ ಕಸಕಡ್ಡಿ ಹಾಗೂ ಗಿಡಗಂಟಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಲಾಯಿತು.ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಇಂತಹ ಸಮಸ್ಯೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಕೇವಲ ಮಳೆ ಬಂದಾಗ ಮಾತ್ರವಲ್ಲದೆ, ಚರಂಡಿಗಳನ್ನು ನಿಯಮಿತವಾಗಿ ಹೂಳು ತೆಗೆಯುವ ಮೂಲಕ ನಿರ್ವಹಿಸಬೇಕು ಮತ್ತು ಚರಂಡಿಗಳನ್ನು ಶಾಶ್ವತವಾಗಿ ದುರಸ್ತಿಪಡಿಸಬೇಕು ಎಂದು ನಾಗರಿಕರು ನಗರಸಭೆ ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 