ಬಳ್ಳಾರಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧ
The police department is always ready to maintain law and order in Bellary
ಬಳ್ಳಾರಿ,ಜ.16: ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಬಳ್ಳಾರಿ ವಲಯ ಪೊಲೀಸ್ ಉಪ ಮಹಾನೀರೀಕ್ಷಕ ಡಾ.ಪಿ.ಎಸ್ ಹರ್ಷ ಅವರು ಬುಧವಾರ ರಾತ್ರಿ ಗಸ್ತು ನಡೆಸಿ ಭದ್ರತಾ ವ್ಯವಸ್ಥೆ ಪರೀಶೀಲಿಸಿದರು. ಸೂಕ್ಷ್ಮ ಪ್ರದೇಶಗಳಲ್ಲಿ ಸಂಚರಿಸಿದ ಬಳಿಕ ಮಾತನಾಡಿದ ಅವರು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದೆ. ಶಾಂತಿ ಭಂಗ ಉಂಟುಮಾಡುವವರ ವಿರುದ್ಧ ನಿಗಾ ವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದೆ ಎಂದು ಹೇಳಿದರು. ಜಿಲ್ಲೆಯ ಗಡಿಭಾಗಗಳಲ್ಲಿ ವಿಶೇಷ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದ್ದು, ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲೆಗಳಿಂದ ಆಗಮಿಸುವ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳ ಮೇಲೆ ನಿಗಾ ಇಡಲು ನಿರಂತರ ತಪಾಸಣಾ ಕಾರ್ಯ ಕೈಗೊಳ್ಳಲಾಗುತ್ತಿದೆ.
ಅದೇರೀತಿಯಾಗಿ ನಗರದ ಲಾಡ್ಜ್ಗಳು ಹಾಗೂ ವಸತಿ ನಿಲಯಗಳಲ್ಲಿ ಸಂಪೂರ್ಣ ತಪಾಸಣೆ ನಡೆಸಲಾಗುತ್ತಿದೆ ಎಂದರು. ಬಳ್ಳಾರಿ ವಲಯದ ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಅಗತ್ಯ ಸಿಬ್ಬಂದಿಗಳನ್ನು ನೇಮಿಸಿಕೊಂಡು ನಿಗಾವಹಿಸಲಾಗಿದೆ. ವಿಶೇಷವಾಗಿ ಬಳ್ಳಾರಿ ನಗರದಲ್ಲಿ ವಲಯವಾರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಿದ್ದು, ಪಾಳಿಯಂತೆ ಕರ್ತವ್ಯ ನಿರ್ವಹಿಸಲಿದ್ದು, ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಲಾಗಿದೆ. ಕಾನೂನು ನಿಯಮ ಉಲ್ಲಂಘಿಸುವವರ ಅಥವಾ ಸಮಾಜದ ಶಾಂತಿ ಕದಡುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 