ಸಾರ್ವಜನಿಕರು ಕಾನೂನು ಪಾಲನೆ ಮಾಡಲಿ: ಪಿಎಸ್‌ಐ ಕಿರಣ್ ಸತ್ತಿಗೇರಿ
ಮಹಾಲಿಂಗಪುರ 26: ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನುನ್ನು ಪಾಲನೆ ಮಾಡುವ ಕಡೆ ಸಾರ್ವಜನಿಕರ ಗಮನ ನೀಡಬೇಕು ಎಂದು ಮಹಾಲಿಂಗಪುರ ಪೊಲೀಸ್ ಠಾಣೆಯ ಪಿಎಸ್‌ಐ ಕಿರಣ ಸತ್ತಿಗೇರಿ ತಿಳಿಸಿದರು. ನಗರದ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ನಗರದ ನಿವಾಸಿಗಳು ಮನೆಗಳನ್ನು ಬೀಗ ಹಾಕಿ ಬೇರೆಡೆಗೆ ಹೋಗುವಾಗ ಪೊಲೀಸ್ ಠಾಣೆಗೆ ಲಿಖಿತ ಪತ್ರದೊಂದಿಗೆ ಮಾಹಿತಿ ನೀಡಬೇಕು. ಇಲ್ಲವಾದರೆ ಗೃಹ ರಕ್ಷಕ ತಂತ್ರಾಂಶದಲ್ಲಿ ನಿಮ್ಮ ಮನೆಯಿರುವ ಸ್ಥಳದ ಮಾಹಿತಿಯನ್ನು ಸೇರೆ್ಡ ಮಾಡಬೇಕು. ಆಗ ಪೊಲೀಸ್ ಗಸ್ತು ನೀಡಲಾಗುವುದು ಎಂದರು.
ದ್ವಿಚಕ್ರ ವಾಹನಗಳನ್ನು ಚಲಾಯಿಸುವಾಗ ಸವಾರರು ತಪ್ಪದೇ ಹೆಲ್ಮಟ್ ಧರಿಸಿ. ನಾಲ್ಕು ಚಕ್ರ ವಾಹನಗಳನ್ನು ಚಲಾಯಿಸುವ ಸವಾರರು ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು. ರಸ್ತೆ ಮಾರ್ಗದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆ ಆಗದಂತೆ ತಾವು ವಾಹನಗಳನ್ನು ಚಲಾಯಿಸಿ ಮತ್ತು ಸೂಕ್ತವಾದ ಸ್ಥಳದಲ್ಲಿ ತಮ್ಮ ವಾಹನಗಳನ್ನ ಪಾಕಿಂರ್ಗ್ ಮಾಡಬೇಕೆಂದು ಹೇಳಿದರು.ಇದರಿಂದ ಅಪಘಾತ ಸಂಭವಿಸಿದಾಗ ಜೀವಕ್ಕೆ ಅಪಾಯ ಕಡಿಮೆಯಾಗುತ್ತದೆ.ಸಮಾಜದ ರಕ್ಷಣೆಗೆ ಪೊಲೀಸ್ ಇಲಾಖೆ ಸದಾ ಸನ್ನದ್ಧ ಎಂದು ಹೇಳಿದರು. ಪಿಎಸ್‌ಐ ವೈ.ಬಿ. ಗೋಸರವಾಡ, ಪೋಲಿಸ ಸಿಬ್ಬಂದಿ ಬಸವರಾಜ ದೇಸಾಯಿ, ವಿಠ್ಠಲ ಬಳಗನ್ನವರ, ಸೇರಿದಂತೆ ರಿಕ್ಷಾ ಚಾಲಕರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.