ಮನುಷ್ಯನ ನಿಜವಾದ ಸಂಪತ್ತು ಆರೋಗ್ಯ ಮತ್ತು ನೆಮ್ಮದಿ: ಜಿಲ್ಲಾಧಿಕಾರಿ
The true wealth of a person is health and peace of mind: District Collector
ಮನುಷ್ಯನ ನಿಜವಾದ ಸಂಪತ್ತು ಆರೋಗ್ಯ ಮತ್ತು ನೆಮ್ಮದಿ: ಜಿಲ್ಲಾಧಿಕಾರಿ
ಗದಗ 24: ಆರೋಗ್ಯ ಮತ್ತು ನೆಮ್ಮದಿ ಮನುಷ್ಯನ ನಿಜವಾದ ಸಂಪತ್ತುಗಳಾಗಿವೆ. ಆಯುರ್ವೇದ ಎಂದರೆ ಆರೋಗ್ಯದಿಂದಿರುವುದು ಎಂದರ್ಥವಾಗಿದೆ. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ನಮ್ಮ ಪೂರ್ವಿಕರು ಆರೋಗ್ಯ ಕಾಪಾಡಿಕೊಳ್ಳುವುದಕ್ಕೋಸ್ಕರ ಒಳ್ಳೆಯ ಆಹಾರ, ವಿಹಾರ ಪದ್ಧತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಿದ್ದರು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಹಾಗೂ ರಾಜ್ಯ ಸರ್ಕಾರ, ಆಯುಷ್ ಇಲಾಖೆ,ಬೆಂಗಳೂರು, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ ಎಂಬ ಘೋಷವಾಕ್ಯದಡಿ ‘ ಶ್ರೀ ಧನ್ವಂತರಿ ಜಯಂತಿ’ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ-2025 ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಜಯಪಾಲಸಿಂಗ್ ಸಮೋರೇಕರ್ ಪ್ರಾಸ್ತಾವಿಕವಾಗಿ ಮಾತನಾಡಿ ನಾವು 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ ಎಂಬ ಘೋಷವಾಕ್ಯದಡಿ ಆಚರಿಸುತ್ತಿದ್ದೇವೆ. ಆಯುರ್ವೇದ ಚಿಕಿತ್ಸೆಯಿಂದ ರೋಗಿಗಳು ಯಾವುದೇ ದುಷ್ಪರಿಣಾಮ ಇಲ್ಲದೇ ಗುಣಮುಖ ಹೊಂದಿ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಆಯುಷ್ ಇಲಾಖೆಯ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಪಾಪನಾಶಿ ಹಾಗೂ ಅಂತೂರು- ಬೆಂತೂರು ಆಯುಷ್ಮಾನ್ ಆರೋಗ್ಯ ಮಂದಿರದ ಯೋಗ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಜರುಗಿತು.
ಡಾ. ಮಹೇಶ ಹಿರೇಮಠ ಅವರು ಅನಾರೋಗ್ಯದಿಂದ ಆರೋಗ್ಯದ ಕಡೆಗೆ ವಿಷಯದ ಕುರಿತಾಗಿ ಉಪನ್ಯಾಸ ನೀಡಿದರು. ಡಾ.ಪ್ರವೀಣ ಸರ್ವದೆ ಬೊಜ್ಜು ನಿವಾರಣೆಯಲ್ಲಿ ಆಹಾರದ ಪಾತ್ರ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಆಯುಷ್ ವೈದ್ಯಾಧಿಕಾರಿಗಳು, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್, ಜಿಲ್ಲಾ ಘಟಕದವರು, ನರ್ಸಿಂಗ್ ವಿದ್ಯಾರ್ಥಿಗಳು, ವೈದ್ಯಾಧಿಕಾರಿಗಳು, ಎಸ್.ಸಿ.ತೋಟಗಂಟಿಮಠ ಕಾಲೇಜಿನ ವಿದ್ಯಾರ್ಥಿಗಳು, ಗಾವಾ ನರ್ಸಿಂಗ್ ಇನ್ಸಟಿಟ್ಯೂಟ್ ವಿದ್ಯಾರ್ಥಿಗಳು, ಆಯುಷ್ ಇಲಾಖೆಯವರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 