ನಿರುದ್ಯೋಗ ಸಮಸ್ಯೆ ನಿವಾರಣೆಗೆ ಒತು:್ತ ಸಾ.ರಾ.ಮಹೇಶ್
ಲೋಕದಶನ ವರದಿ
ಬಳ್ಳಾರಿ: ಹಂಪಿ (ಎದುರು ಬಸವಣ್ಣ ವೇದಿಕೆ) 04: ಪ್ರವಾಸೋದ್ಯಮ ಇಲಾಖೆ ವತಿಯಿಂದ ಈ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವಗಳ ಆಚರಣೆಯ ಜೊತೆಗೆ ನಿರುದ್ಯೋಗ ಸಮಸ್ಯೆಯ ನಿವಾರಣೆಗೂ ಹೆಚ್ಚಿನ ಒತ್ತು ನೀಡಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಸಚಿವ ಸಾ.ರಾ. ಮಹೇಶ್ ಹೇಳಿದರು. ಹಂಪಿಯಲ್ಲಿ ಎರಡು ದಿನಗಳ ಕಾಲ ವಿಜೃಂಭಣೆಯಿಂದ ಜರುಗಿದ ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕನ್ನಡ ನಾಡಿನ ಹಿರಿಮೆ, ಶಿಲ್ಪ ಕಲಾ ವೈಭವ, ವೈವಿಧ್ಯಮಯ ಸಂಸ್ಕೃತಿಯನ್ನು ಬಿಂಬಿಸುವ ಹಂಪಿ ಉತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸಕರ್ಾರ 10 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಇಲಾಖೆ ಈ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವಗಳ ಆಚರಣೆ, ಪ್ರವಾಸಿ ತಾಣಗಳ ಅಭಿವೃದ್ಧಿಯಂತಹ ಕಾರ್ಯಗಳ ಜೊತೆಗೆ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವಂತಹ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲು ಯೋಜಿಸಿದೆ. ರಾಜ್ಯದ 9 ಲಕ್ಷ ನಿರುದ್ಯೋಗಿಗಳಿಗೆ, ವಿವಿಧ ರೀತಿಯಲ್ಲಿ ಉದ್ಯೋಗ ಸೃಜಿಸುವಂತೆ ಮಾಡಲು ಕ್ರಮ ಕೈಗೊಳ್ಳುತ್ತಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸಕರ್ಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಹಂಪಿ ಉತ್ಸವವನ್ನು ಈ ಹಿಂದೆಯೂ ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಹಂಪಿ ಉತ್ಸವ ಬರುವ ದಿನಗಳಲ್ಲಿ ಕನಿಷ್ಟ 4 ರಿಂದ 5 ದಿನಗಳ ಕಾಲ ಅರ್ಥಪೂರ್ಣವಾಗಿ, ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ವಿಜೃಂಭಣೆಯಿಂದ ನಡೆಯುವಂತಾಗಬೇಕು. ಈ ದಿಸೆಯಲ್ಲಿ ಇಲಾಖೆ ನಿಧರ್ಾರಗಳನ್ನು ಕೈಗೊಳ್ಳಲಿದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಅವರು ಭರವಸೆ ನೀಡಿದರು.
ಜಿಲ್ಲಾಧಿಕಾರಿ ಡಾ. ವಿ. ರಾಮ ಮನೋಹರ್ ಪ್ರಸಾತ್ ಪ್ರಾರಂಭದಲ್ಲಿ ಸ್ವಾಗತಿಸಿದರು. ತಾ.ಪಂ. ಅಧ್ಯಕ್ಷೆ ಜೋಗದ ನೀಲಮ್ಮ, ಹೊಸಪೇಟೆ ನಗರಸಭೆ ಅಧ್ಯಕ್ಷ ಗುಜ್ಜಲ ನಿಂಗಪ್ಪ, ತಾ.ಪಂ. ಸದಸ್ಯ ಪಾಲಪ್ಪ, ಕಮಲಾಪುರ ಪ.ಪಂ. ಅಧ್ಯಕ್ಷ ಡಾ. ಬಿ.ಆರ್. ಮಳಲಿ, ಜಿ.ಪಂ. ಸಿಇಒ ನಿತೀಶ್ ಕೆ., ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತೆ ಜಿ.ಆರ್.ಜೆ. ದಿವ್ಯಪ್ರಭು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಖ್ಯಾತ ಗಾಯಕ ಕಿಕ್ಕೇರಿ ಕೃಷ್ಣಮೂತರ್ಿ ಅವರ ತಂಡ ನಾಡಗೀತೆಯನ್ನು ಪ್ರಸ್ತುತಪಡಿಸಿತು.